Wednesday, Feb 26 2020 | Time 10:45 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸುಬ್ರತಾ ರಾಯ್ ನ್ಯಾಯಾಲಯದ ಹಾಜರಿಯಿಂದ ವಿನಾಯ್ತಿ ನೀಡಿ ಸುಪ್ರೀಂಕೋರ್ಟ್

ನವದೆಹಲಿ, ಜ 24 (ಯುಎನ್ಐ) ಸಹರಾ ಸಮೂಹದ ಮುಖ್ಯಸ್ಥ ಸುಬ್ರತಾ ರಾಯ್ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾಗುವ ಅಗತ್ಯವಿಲ್ಲ ಎಂದಿರುವ ಸುಪ್ರೀಂಕೋರ್ಟ್, ಅವರಿಗೆ ಒದಗಿಸಿರುವ ದೆಹಲಿ ಪೊಲೀಸ್ ಭದ್ರತೆಯನ್ನು ಹಿಂಪಡೆಯಲು ನಿರಾಕರಿಸಿದೆ.
ಶುಕ್ರವಾರ ಸೆಬಿ ಹಾಗೂ ರಾಯ್ ಪರ ವಕೀಲರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ, ಆರೋಪಿ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ಮಾನ್ಯ ಮಾಡುತ್ತೇವೆ ಎಂದಿತು.
ವಿಚಾರಣೆ ವೇಳೆ ಸಹಾರಾ ಮುಖ್ಯಸ್ಥ ನ್ಯಾಯಾಲಯದಲ್ಲಿ ಹಾಜರಿದ್ದರು. ಹೂಡಿಕೆದಾರರಿಗೆ ಹಣ ಹಿಂದಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೆಬಿ ಹೂಡಿಕೆದಾರರ ಪರವಾಗಿ ವಾದ ಮಂಡಿಸುತ್ತಿದೆ.
ಸಹಾರಾ ಸಂಸ್ಥೆ ಎಲ್ಲಾ ಹೂಡಿಕೆದಾರರಿಗೆ ಹಣವನ್ನು ಹಿಂದಿರುಗಿಸಿರುವುದಾಗಿ ವಾದಿಸುತ್ತಿದೆ. ಇದನ್ನು ಸೆಬಿ ವಿರೋಧಿಸುತ್ತಿದೆ.
ಪ್ರಕರಣ ಸಂಬಂಧ ಒಂದು ವರ್ಷ 9 ತಿಂಗಳು ತಿಹಾರ್ ಜೈಲಿನಲ್ಲಿದ್ದ ಸುಬ್ರತಾ ರಾಯ್ ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಯುಎನ್ಐ ಎಸ್ಎಚ್ 1925