Wednesday, Feb 26 2020 | Time 10:46 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸುಭಾಷ್ ಚಂದ್ರಬೋಸ್ ಅವರ ಜನ್ಮವಾರ್ಷಿಕೋತ್ಸವ: ರಾಷ್ಟ್ರಪತಿ, ಉಪರಾಷ್ಟ್ರಪತಿಯವರಿಂದ ಶ್ರದ್ಧಾಂಜಲಿ

ಸುಭಾಷ್ ಚಂದ್ರಬೋಸ್ ಅವರ ಜನ್ಮವಾರ್ಷಿಕೋತ್ಸವ: ರಾಷ್ಟ್ರಪತಿ, ಉಪರಾಷ್ಟ್ರಪತಿಯವರಿಂದ ಶ್ರದ್ಧಾಂಜಲಿ

ನವದೆಹಲಿ, ಜ23(ಯುಎನ್‍ಐ)-ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಗುರುವಾರ ಮಹಾ ನಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ರಾಷ್ಟ್ರಪತಿಇ ಭವನದಲ್ಲಿ ನೇತಾಜಿಯವರ ಭಾವಚಿತ್ರಕ್ಕೆ ರಾಮನಾಥ್ ಕೋವಿಂದ್ ಪುಷ್ಪನಮನ ಸಲ್ಲಿಸಿದರು.

‘ರಾಷ್ಟ್ರನಾಯಕ ಮತ್ತು ಭಾರತ ಸ್ವಾತಂತ್ರ್ಯ ಸಂಗ್ರಾಮದ ಮಹಾ ನಾಯಕ ನೇತಾಜಿ ಸುಭಾಷ್ ಚಂದ್ರಬೋಸ್ ಜೀ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಶ್ರದ್ಧಾಂಜಲಿ ಸಮರ್ಪಿಸುತ್ತಿದ್ದೇನೆ.’ ಎಂದು ಎಂ.ವೆಂಕಯ್ಯನಾಯ್ಡು ಶ್ರದ್ಧಾಂಜಲಿ ಸಲ್ಲಿಸಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

‘ಸುಭಾಷ್ ಚಂದ್ರ ಬೋಸ್ ಅವರು ಜನರಲ್ಲಿ ದೇಶಭಕ್ತಿಯನ್ನು ತುಂಬಿದರು. ಅವರು ನೀಡಿದ ‘ಜೈಹಿಂದ್’ ಘೋಷಣೆ ಸಾವಿರಾರು ಜನರಿಗೆ ಸ್ಫೂರ್ತಿಯಾಗಿ, ಸ್ವಾತಂತ್ರ ಸಂಗ್ರಾಮದಲ್ಲಿ ಧುಮುಕುವಂತೆ ಮಾಡಿದೆ.’ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

ಯುಎನ್‍ಐ ಎಸ್‍ಎಲ್‍ಎಸ್ 1542