Friday, Oct 30 2020 | Time 06:53 Hrs(IST)
National Share

ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮೂರು ತಿಂಗಳಲ್ಲಿ 19 ಸಾವಿರ ಕೋಟಿರೂ. ವಂಚನೆ

ನವದೆಹಲಿ, ಸೆ. 20 (ಯುಎನ್ಐ) ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಗೆ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕದಲ್ಲಿ 2,867 ಪ್ರಕರಣಗಳ ಮೂಲಕ 19,964 ಕೋಟಿ ರುಪಾಯಿ ವಂಚನೆಯಾಗಿದೆ.

ಆರ್ ಟಿಐ ಮೂಲಕ ಈ ಮಾಹಿತಿ ಬಹಿರಂಗವಾಗಿದೆ. ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ (ಎಸ್ ಬಿಐ) ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಯಾಗಿವೆ. ಆದರೆ ಮೌಲ್ಯದ ದೃಷ್ಟಿಯಿಂದ ಬ್ಯಾಂಕ್ ಆಫ್ ಇಂಡಿಯಾಗೆ ಅತಿ ಹೆಚ್ಚು ವಂಚನೆಯಾಗಿದೆ.
ಆರ್ ಟಿಐ ಕಾರ್ಯಕರ್ತ ಚಂದ್ರ ಶೇಖರ್ ಗೌರ್ ಅವರ ಮನವಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ. 2020ರ ಏಪ್ರಿಲ್ ನಿಂದ ಜೂನ್ ಮಧ್ಯೆ ಒಟ್ಟು 12 ಸಾರ್ವಜನಿಕ ಬ್ಯಾಂಕ್ ನಲ್ಲಿ ಎಸ್ ಬಿಐನಲ್ಲಿ ಅತಿ ಹೆಚ್ಚು, ಅಂದರೆ 2050 ವಂಚನೆ ಪ್ರಕರಣಗಳು ದಾಖಲಾಗಿದ್ದು, 2,325.88 ಕೋಟಿ ರುಪಾಯಿ ವಂಚನೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯುಎನ್ಐ ಕೆಎಸ್ಆರ್ 2147
More News
ಮಹಾಮೈತ್ರಿ ಮಾತ್ರ ಬಿಹಾರದ ಜನತೆಗೆ ಉತ್ತಮ ಭವಿಷ್ಯ ನೀಡಬಲ್ಲದು; ರಾಹುಲ್‌

ಮಹಾಮೈತ್ರಿ ಮಾತ್ರ ಬಿಹಾರದ ಜನತೆಗೆ ಉತ್ತಮ ಭವಿಷ್ಯ ನೀಡಬಲ್ಲದು; ರಾಹುಲ್‌

29 Oct 2020 | 8:43 PM

ನವದೆಹಲಿ, ಅ 29 (ಯುಎನ್ಐ) ಬಿಹಾರದ ಜನತೆಗೆ ಬದಲಾವಣೆ ಬೇಕು ಮತ್ತು ಮಹಾಮೈತ್ರಿ ಮಾತ್ರ ರಾಜ್ಯದ ಜನತೆಗೆ ಉತ್ತಮ ಭವಿಷ್ಯ ಖಾತರಿಪಡಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಹೇಳಿದ್ದಾರೆ.

 Sharesee more..
ಪರಿಸರಸ್ನೇಹಿ ಕಟ್ಟಡಗಳ ನಿರ್ಮಾಣಕ್ಕಿದು ಸುಸಮಯ: ಉಪ ರಾಷ್ಟ್ರಪತಿ

ಪರಿಸರಸ್ನೇಹಿ ಕಟ್ಟಡಗಳ ನಿರ್ಮಾಣಕ್ಕಿದು ಸುಸಮಯ: ಉಪ ರಾಷ್ಟ್ರಪತಿ

29 Oct 2020 | 5:57 PM

ನವದೆಹಲಿ, ಅ 29 (ಯುಎನ್ಐ) ದೇಶದಲ್ಲಿ ಇನ್ನು ಮುಂದೆ ನಿರ್ಮಾಣವಾಗು ಹೊಸ ಕಟ್ಟಡಗಳನ್ನು ಕಡ್ಡಾಯವಾಗಿ ಹಸಿರು ಮತ್ತು ಪರಿಸರ ಸ್ನೇಹಿಯಾಗಿಸುವ ಸಮಯ ಬಂದಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹೇಳಿದ್ದಾರೆ.

 Sharesee more..

ಒಂದು ಕೆಜಿ ಅಸ್ಸಾಂ ಚಹಾ 75,000 ರೂ ಗೆ ಮಾರಾಟ !

29 Oct 2020 | 5:51 PM

 Sharesee more..