Wednesday, Feb 26 2020 | Time 10:31 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಸಾರ್ವಜನಿಕ ವಲಯದ ಬ್ಯಾಂಕ್ ಮುಖ್ಯಸ್ಥರೊಂದಿಗೆ ನಾಳೆ ನಿರ್ಮಲಾ ಸಭೆ

ನವದೆಹಲಿ, ಡಿ 27 (ಯುಎನ್ಐ) ಆರ್ಥಿಕ ಪ್ರಗತಿ, ಬಜೆಟ್ ತಯಾರಿಕೆಯ ಹಿನ್ನಲೆ , ಸಾಲ ವಿತರಣೆಯಲ್ಲಿನ ಪ್ರಗತಿ ,ಆಗಿರುವ ಸಾಧನೆ ಪರಿಶೀಲಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಾಳೆ, ಶನಿವಾರ ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.
ಫೆಬ್ರವರಿ 1 ರಂದು ತನ್ನ ಎರಡನೇ ಪೂರ್ಣ ಬಜೆಟ್ ಅನ್ನು ಮಂಡಿಸಲು ಸಚಿವರು ಎಲ್ಲಾ ತಯಾರಿ ನಡೆಸುತ್ತಿರುವಾಗಲೇ ಈ ಸಭೆಯೂ ನಡೆಯುತ್ತಿದೆ.
ಬೇಡಿಕೆ, ಮತ್ತು ಉತ್ಪಾದನೆ ಹೆಚ್ಚಿಸುವಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, 2020-21ರ ಬಜೆಟ್‌ಗೆ ಮುಂಚಿತವಾಗಿ ಪಿಎಸ್‌ಬಿಗಳ ಎಂಡಿ ಮತ್ತು ಸಿಇಒಗಳೊಂದಿಗಿನ ಸಭೆ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ ಎಂದೂ ಉನ್ನತ ಮೂಲಗಳು ತಿಳಿಸಿವೆ.
ಸಭೆಯು ಎನ್‌ಸಿಎಲ್‌ಟಿ ಮತ್ತು ಎನ್‌ಸಿಎಲ್‌ಟಿ ಅಲ್ಲದ ಎರಡೂ ವಿಧಾನಗಳ ಮೂಲಕ ಮಸೂಲಾಗದ ಸಾಲ , ಮರು ಪಾವತಿ ವಿಧಾನ ಕುರಿತು ಮಹತ್ವದ ಚರ್ಚೆಯನ್ನು ನಡಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಹಿಂದಿನ ನಾಲ್ಕು ಹಣಕಾಸು ವರ್ಷಗಳಲ್ಲಿ ಬ್ಯಾಂಕುಗಳು 4,01,393 ಕೋಟಿ ರೂ. ವಸೂಲಿ ಮಾಡಿವೆ ಎಂಬುದು ಇಲ್ಲಿ ಪ್ರಮುಖ ಸಂಗತಿಯಾಗಿದೆ.
ಆರ್ಥಿಕ ಬೆಳವಣಿಗೆ ದರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಆರು ವರ್ಷಗಳಿಗಿಂತಲೂ ಕಡಿಮೆ ಶೇಕಡಾ 4.5 ಕ್ಕೆ ಇಳಿದಿದೆ, ಈ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಯುಎನ್ಐ ಕೆಎಸ್ಆರ್ 1015