Wednesday, Feb 26 2020 | Time 10:04 Hrs(IST)
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಸಾಲು, ಸಾಲು ಪ್ರಕರಣಗಳ ವಿಚಾರಣೆ: ಎಲ್ಲರ ಚಿತ್ತ ಸುಪ್ರೀಂನತ್ತ !

ನವದೆಹಲಿ, ಜನವರಿ, 6 (ಯುಎನ್ಐ) ಚಳಿಗಾಲದ ರಜೆಯ ಬಳಿಕ ಸೋಮವಾರದಿಂದ ಪುನರಾರಂಭವಾಗಲಿರುವ ಸುಪ್ರೀಂ ಕೋರ್ಟ್ ಮುಂದೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಕರಣ,ಸೇರಿದಂತೆ ಹಲವು ಮಹತ್ವದ ಪ್ರಕಣಗಳ ವಿಚಾರಣೆ ನಡೆಯಲಿದ್ದು, ಎಲ್ಲರ ಕಣ್ಣು, ಚಿತ್ತ ಕೋರ್ಟ್ ನತ್ತ ನೆಟ್ಟಿದೆ.
ಮಹತ್ವದ ಪ್ರಕರಣಗಳ ಪೈಕಿ ಶಬರಿಮಲೆ ವಿವಾದವೂ ಒಂದಾಗಿದ್ದು ಅದರ ವಿಚಾರಣೆಯನ್ನು ಏಳು ಸದಸ್ಯರ ಸಾಂವಿಧಾನಿಕ ಪೀಠ ನಡೆಸಲಿದೆ. ಮೊದಲ ದಿನವೇ, ಟಾಟಾ ಸನ್ಸ್ ಕಂಪೆನಿ ಹಾಗೂ ಸೈರಸ್ ಮಿಸ್ತ್ರಿ ನಡುವಿನ ವ್ಯಾಜ್ಯದ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಆನಂತರದ ದಿನಗಳಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೆನೆಪದರಿನಲ್ಲಿ ಇರುವವರಿಗೆ ಮೀಸಲಾತಿ ಅನ್ವಯವಾಗದು ಎಂಬ 2018ರ ಸುಪ್ರೀಂ ಕೋರ್ಟ್ ನ ತೀರ್ಪನ್ನು 7 ಸದಸ್ಯರ ಪೀಠ ಮತ್ತೆ ವಿಚಾರಣೆಗೊಳಪಡಿಸಬೇಕು ಎಂದು ಕೇಂದ್ರ ಸರಕಾರ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.
ಇನ್ನು, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಅನಂತರ ಅಲ್ಲಿನ ಸ್ಥಳೀಯ ಆಡಳಿತ ಹಾಕಿದ್ದ ಪ್ರತಿಬಂಧಕಾಜ್ಞೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸಲ್ಲಿಸಿರುವ ಅರ್ಜಿ ವಿಚಾರಣೆಯೂ ನಡೆಯಲಿದೆ.
ಜನವರಿ 22ರಿಂದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಪೀಠದಿಂದ ಪೌರತ್ವ ಕಾಯ್ದೆ ತಿದ್ದುಪಡಿ ಪ್ರಕರಣ ವಿಚಾರಣೆ ನಡೆಯಲಿದೆ.
ಯುಎನ್ಐ ಕೆಎಸ್ಆರ್ 1020