Sunday, Mar 29 2020 | Time 00:32 Hrs(IST)
National Share

ಸುಳ್ಳುಗಾರರ ಮುಖ್ಯಸ್ಥ, ಸುಳ್ಳುಗಾರರ ಸರ್ಕಾರ: ಬಿಜೆಪಿ, ಎಎಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ, ಫೆಬ್ರವರಿ 6 (ಯುಎನ್‌ಐ) ದೆಹಲಿ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಎಎಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಆಡಳಿತಾರೂಢ ಪಕ್ಷಗಳಾದ ಬಿಜೆಪಿ ಮತ್ತು ಎಎಪಿ, ರಾಷ್ಟ್ರ ರಾಜಧಾನಿಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ ಎಂದು ಗುರುವಾರ ಆರೋಪಿಸಿದೆ.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎರಡೂ ಪಕ್ಷಗಳನ್ನು "ಸುಳ್ಳುಗಾರರ ಮುಖ್ಯಸ್ಥ" ಮತ್ತು "ಸುಳ್ಳುಗಾರರ ಸರ್ಕಾರ" ಎಂದು ಜರಿದರು. ಮಾತ್ರವಲ್ಲ ಉಭಯ ಪಕ್ಷಗಳ ವೈಫಲ್ಯಗಳನ್ನು ಪಟ್ಟಿ ಮಾಡಿ ಟೀಕಾಪ್ರಹಾರ ನಡೆಸಿದರು.
"ಶುದ್ಧ ಕುಡಿಯುವ ನೀರು ಈಗ ದೆಹಲಿಯ ಕನಸಾಗಿದೆ. ಮೋದಿಯವರು ಕಳೆದ ಚುನಾವಣೆಯಲ್ಲಿ ಗಂಗಾ ನೀರನ್ನು ದೆಹಲಿಗೆ ತರುವುದಾಗಿ ಭರವಸೆ ನೀಡಿದ್ದರು. ಆದರೆ 60 ತಿಂಗಳುಗಳು ಕಳೆದರೂ ಇಲ್ಲಿನ ಜನರು ನೀರಿಗಾಗಿ ಕಾಯುತ್ತಿದ್ದಾರೆ. ಒಬ್ಬರು ಪ್ರಧಾನಿ ಮತ್ತು ಇನ್ನೊಬ್ಬರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ, ಆದರೆ ದೆಹಲಿಯ ಒಟ್ಟು ನೀರಿಗೆ ಒಂದು ಲೀಟರ್ ಕೂಡ ಹೆಚ್ಚುವರಿಯಾಗಿ ಸೇರಿಸಲಾಗಿಲ್ಲ ಎಂದು ಅವರು ಆರೋಪಿಸಿದರು.
ಎಎಪಿಯನ್ನು ಜಾಹೀರಾತು ಪಕ್ಷ ಮತ್ತು ಬಿಜೆಪಿಯನ್ನು ಸುಳ್ಳುಗಾರರ ಪಕ್ಷ ಎಂದು ಕರೆದ ಕಾಂಗ್ರೆಸ್ ವಕ್ತಾರರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಮತದಾರರು ಅಚ್ಚರಿಯ ಫಲಿತಾಂಶ ನೀಡಲಿದ್ದಾರೆ ಎಂದು ಹೇಳಿದರು.
"ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಮಗೆ ಮತದಾನೋತ್ತರ ಸಮೀಕ್ಷೆಯಲ್ಲಿ ಎರಡನೇ ಸ್ಥಾನದ ಭವಿಷ್ಯ ನುಡಿಯಲಾಯಿತು. ಆದರೆ ನಾವು 31 ಸ್ಥಾನಗಳನ್ನು ಗೆದ್ದಿದ್ದೇವೆ. ಈ ಚುನಾವಣೆಯಲ್ಲಿಯೂ ಇದೇ ಉದಾಹರಣೆ ಪುನರಾವರ್ತನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.
ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ವಿಷಯವನ್ನು ಪ್ರಸ್ತಾಪಿಸಿದ ಸುರ್ಜೆವಾಲಾ ಅವರು, ಮೋದಿ ಮತ್ತು ಕೇಜ್ರಿವಾಲ್ ಇಬ್ಬರೂ ದೆಹಲಿಯನ್ನು ಗ್ಯಾಸ್ ಚೇಂಬರ್ (ಅನಿಲ ಕೊಠಡಿ)ಯನ್ನಾಗಿ ಮಾಡಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ತಳ್ಳಿಹಾಕಿದ ಸುರ್ಜೆವಾಲಾ, "ನೀವು 2 ಲಕ್ಷ ಹೊಸ ಶೌಚಾಲಯಗಳ ಭರವಸೆ ನೀಡಿದ್ದೀರಿ, ಅವು ಎಲ್ಲಿವೆ?" ಎಂದು ಪ್ರಶ್ನಿಸಿದರು.
"2015-16ರಲ್ಲಿ 120 ಕೋಟಿಯಷ್ಟಿದ್ದ ಎಸ್‌ಸಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಬಜೆಟ್ ಅನ್ನು 16.5 ಕೋಟಿಗೆ ಇಳಿಸಲಾಗಿದೆ. ಹಿಂದುಳಿದ ಸಮುದಾಯಗಳಿಗೆ ದೆಹಲಿಯಲ್ಲಿ ವಾಸಿಸಲು ಅವಕಾಶವಿಲ್ಲವೇ?" ಎಂದು ಅವರು ಪ್ರಶ್ನಿಸಿದರು.
ಕೇಜ್ರಿವಾಲ್ ಮತ್ತು ಮೋದಿ ಇಬ್ಬರೂ ಕಳೆದ 5 ವರ್ಷಗಳಲ್ಲಿ ಒಂದೇ ಒಂದು ಆಸ್ಪತ್ರೆಯನ್ನು ಸಹ ನಿರ್ಮಿಸಲಿಲ್ಲ ಎಂದು ಅವರು ಆರೋಪಿಸಿದರು.
ಯುಎನ್ಐ ಎಎಚ್ 2041
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..