Monday, Sep 21 2020 | Time 11:18 Hrs(IST)
  • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
  • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
  • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
  • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
  • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ಸ್ವಲ್ಪ ತಗ್ಗಿದ ಮಳೆ: ಗಂಭೀರವಾಗಿರುವ ಪ್ರವಾಹ : ಮಾಹಿತಿ ಪಡೆದ ಮುಖ್ಯಮಂತ್ರಿ

ಬೆಂಗಳೂರು, ಆ 7 [ಯುಎನ್ಐ] ರಾಜ್ಯದ ಹಲವೆಡೆ ಮಳೆಯ ಅಬ್ಬರ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಪ್ರವಾಹ ಪರಿಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಪರಿಹಾರ ಕಾರ್ಯ ತೀವ್ರಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ಸಹಸ್ರಾರು ಮನೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.
ಮುಂಬೈ ಕರ್ನಾಟಕ ಭಾಗದಲ್ಲಿ ಪ್ರವಾಹ ತೀವ್ರವಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನೆರೆ ಪರಿಸ್ಥಿತಿ ಇನ್ನೂ ಶಮನಗೊಂಡಿಲ್ಲ. ಬೆಳಗಾವಿಯ ಕೃಷ್ಣ, ಮಲಪ್ರಭಾ, ಮಾರ್ಕೆಂಡೇಯ ನದಿ ತೀರದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಜಿಲ್ಲಾಡಳಿತ ಮುಂದಾಗಿದೆ.
ಮಹಾರಾಷ್ಟ್ರದ ಕೊಯ್ನಾ ಸೇರಿದಂತೆ ವಿವಿಧ ಜಲಾಶಯ ಮತ್ತು ಬ್ಯಾರೇಜ್ ಗಳಿಂದ ಆಲಮಟ್ಟಿ ಅಣೆಕಟ್ಟೆಗೆ 1.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1.80 ಲಕ್ಷ ಕ್ಯೂಸೆಕ್ ನೀರನ್ನು ಯಾದಗಿರಿ ಜಿಲ್ಲೆಯ, ಸುರಪುರ ತಾಲೂಕಿನ ನಾರಾಯಣಪುರ ಅಣೆಕಟ್ಟೆಗೆ ಆಲಮಟ್ಟಿಯ 26 ಕ್ರಾಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರ ಬಿಡಲಾಗಿದೆ. ವಿದ್ಯುತ್ ಉತ್ಪಾದನೆಗಾಗಿ 39ಸಾವಿರ ಕ್ಯೂಸೆಕ್ ನೀರನ್ನು ಜಲ ವಿದ್ಯುದಾಗಾರಕ್ಕೆ ಹರಿದು ಬಿಡಲಾಗಿದೆ.
ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಅಗತ್ಯ ತುರ್ತು ಕ್ರಮಗಳಿಗೆ ಅವರ ಒಪ್ಪಿಗೆ ಪಡೆಯದೆ ಮುಂದುವರೆಯುವಂತೆ ಸೂಚಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೊಮಣ್ಣ ಅವರೊಂದಿಗೂ ಕರೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಅವರು, ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ತಲಕಾವೇರಿಯಲ್ಲಿ ಉಂಟಾದ ಭೂಕುಸಿತದ ಕುರಿತಂತೆಯೂ ಮಾಹಿತಿ ಪಡೆದರು. ಭೂಕುಸಿತದ ನಂತರ ನಾಪತ್ತೆಯಾಗಿರುವ ಅರ್ಚಕರ ಕುಟುಂಬದ ಕುರಿತು ಕಳವಳ ವ್ಯಕ್ತಪಡಿಸಿದ ಯಡಿಯೂರಪ್ಪ, ಅರ್ಚಕರನ್ನು ಹುಡುಕುವ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿದರು.

ಮಳೆ ಅನಾಹುತಕ್ಕೆ ಸಂಬಂಧಿಸಿದಂತೆ ಕೂಡಲೇ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಸಹ ಸೂಚಿಸಿದ್ದಾರೆ.
ವಸತಿ ಸಚಿವ ವಿ. ಸೋಮಣ್ಣ ಕೊಡಗು, ಕಂದಾಯ ಸಚಿವ ಅರ್. ಅಶೋಕ್ ಕರಾವಳಿಯಲ್ಲಿ ಮತ್ತು ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆ ಮುಂದುವರೆದಿದ್ದು, ನದಿ ತೀರದ ಪಟ್ಟಣಗಳಾದ ಶೃಂಗೇರಿ, ಬಾಳೆಹೊನ್ನೂರು, ಹೊರನಾಡು ಜಲಾವೃತಗೊಂಡಿದೆ. ಬಾಳೆಹೊನ್ನೂರು ಪಟ್ಟಣದ ಸಂತೆ ಮೈದಾನ ಮತ್ತು ನಗರದ ತಗ್ಗು ಪ್ರದೇಶದ ಕೆಲ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ.
ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಕೂಡಲೇ ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ-ಜಾನುವಾರುಗಳನ್ನು ರಕ್ಷಣೆಗೆ ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಹಲವು ಗ್ರಾಮಗಳು ಪ್ರವಾಹದ ಭೀತಿ ಎದುರಿಸುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೊಪ್ಪಳ ಜಿಲ್ಲಾಡಳಿತ ಮನವಿ ಮಾಡಿದೆ. ಮಲೆನಾಡಿನಲ್ಲಿ ಸತತ ಮಳೆಯಾಗುತ್ತಿರುವ ಕಾರಣ ತುಂಗಭದ್ರ ಜಲಾಶಯಕ್ಕೆ 81 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಜಲಾಶಯ ಪೂರ್ಣ ಭರ್ತಿಯಾಗಲು ಇನ್ನು ಕೇವಲ 17 ಅಡಿ ಬಾಕಿ ಇದೆ. ತುಂಗಾ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಯುಎನ್ಐ ವಿಎನ್ 2107