Sunday, Mar 29 2020 | Time 00:50 Hrs(IST)
National Share

ಸಾವಿತ್ರಿಬಾಯಿ ಫುಲೆ ಕಾಂಗ್ರೆಸ್ ಗೆ ಗುಡ್ ಬೈ, ಹೊಸ ಪಕ್ಷ ಘೋಷಣೆ

ನವದೆಹಲಿ, ಡಿಸೆಂಬರ್ 26 (ಯುಎನ್ಐ) ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಸಾವಿತ್ರಿಬಾಯಿ ಫುಲೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಲಿತರ ಆಶೋತ್ತರಕ್ಕಾಗಿ ಹೊಸ ಪಕ್ಷ ಕಟ್ಟುವ ಘೋಷಣೆ ಮಾಡಿದ್ದಾರೆ.
ಪ್ರಮುಖ ದಲಿತ ನಾಯಕಿಯಾಗಿರುವ ಫುಲೆ ಕಳೆದ ವರ್ಷ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಬಿಜೆಪಿಗೆ ರಾಜೀನಾಮೆ ನೀಡಿದ್ದರು,ಈಗ ಕ್ರಿಸ್ಮಸ್ ಸಯಯದಲ್ಲೀ ಕೈಗೆ ರಾಜಿನಾಮೆ ಕೊಟ್ಟು ಹೊರಬಂದಿದ್ದಾರೆ.
ಆಡಳಿತ ಬಿಜೆಪಿ ಸಮಾಜದ ವಿಭಜನೆಗೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದ್ದ ಅವರು ಇದೀಗ ಕಾಂಗ್ರೆಸ್ ನಲ್ಲಿ ತನ್ನ ಧ್ವನಿ, ನೋವು ಕೇಳುತ್ತಿಲ್ಲ ಎಂಬ ನೋವಿನ ಮೇರೆಗೆ ಪಕ್ಷ ತೊರೆದಿದ್ದಾರೆ.
ಬಿಎಸ್ ಪಿ ನಾಯಕಿ ಮಾಯಾವತಿಗೆ ನಿಕಟವಾಗಿದ್ದ ಸಾವಿತ್ರಿ ಪುಲೆ 2000 ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. 2002, 2007 ಮತ್ತು 2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2012 ರಲ್ಲಿ ಜಯ ಗಳಿಸಿದ್ದರು .
2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಲೋಕಸಭೆಗೆ ಪ್ರವೇಶ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದರು.
ಯುಎನ್ಐ ಕೆಎಸ್ಆರ್ 1600
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..