Wednesday, Jan 29 2020 | Time 15:01 Hrs(IST)
  • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
  • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
  • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
  • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
  • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
  • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
  • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
Parliament Share

ಸಂಸತ್ತಿನಲ್ಲಿ ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ : ಚಿದು

ನವದೆಹಲಿ, ಡಿಸೆಂಬರ್ 5 (ಯುಎನ್‌ಐ) ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದಿರುವ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಗುರುವಾರ ಸಂಸತ್ ಅಧಿವೇಶನಕ್ಕೆ ಹಾಜರಾಗಿದ್ದಾರೆ .
'ಸಂಸತ್ತಿನಲ್ಲಿ ನನ್ನ ಧ್ವನಿಯನ್ನು ಸರ್ಕಾರ ಅಡಗಿಸಲು ಸಾಧ್ಯವಿಲ್ಲ' ಎಂದು ಚಿದಂಬರಂ ಸದನಕ್ಕೆ ಬರುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.
2007 ರಲ್ಲಿ ಹಣಕಾಸು ಸಚಿವರಾಗಿದ್ದಾಗ ಐಎನ್‌ಎಕ್ಸ್ ಮೀಡಿಯಾ ಗ್ರೂಪ್ ವಿದೇಶಿ ಹಣವನ್ನು ಸ್ವೀಕರಿಸಲು ಅವಕಾಶ ಮಾಡಿಕೊಟ್ಟು ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಆಗಸ್ಟ್ 21 ರಂದು ಸಿಬಿಐ ಬಂಧಿಸಿದ ನಂತರ ಚಿದಂಬರಂ ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಮೂರು ತಿಂಗಳ ಕಾಲ ಇರಿಸಲಾಗಿತ್ತು.
ನಿನ್ನೆ ಸುಪ್ರಿಂ ಕೋರ್ಟ್ 2 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಎರಡು ಶೂರಿಟಿ ಭದ್ರತೆ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯ ಬುಧವಾರ ಆದೇಶಿಸಿತ್ತು.
ಯಾವುದೇ ಸಂದರ್ಶನವನ್ನು ನೀಡುವುದು ಅಥವಾ ಪ್ರಕರಣದ ಬಗ್ಗೆ ಯಾವುದೇ ಹೇಳಿಕೆ ನೀಡುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದರ ವಿರುದ್ಧ ಅಥವಾ ಸಾಕ್ಷ್ಯಗಳನ್ನು ಹಾಳುಮಾಡದಂತೆ ಅವರಿಗೆ ಎಚ್ಚರಿಕೆ ಸಹ ನೀಡಿತ್ತು .
ಯುಎನ್ಐ ಕೆಎಸ್ಆರ್ 1305