Sunday, Jan 26 2020 | Time 23:53 Hrs(IST)
 • ‘ಪದ್ಮ ‘ ಪ್ರಶಸ್ತಿ ಪುರಸ್ಕೃತರಿಗೆ ನಳಿನ್‍ ಕುಮಾರ್ ಕಟೀಲ್‍ ಅಭಿನಂದನೆ
 • ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆೆ ರೈಲ್ವೇಸ್ ಸವಾಲು
 • ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬೀಗರಾಗಲಿರುವ ಕಾಂಗ್ರೆಸ್ ಶಾಸಕ ಕೃಷ್ಣಪ್ಪ
 • ಹಿಂಸಾಚಾರ ಯಾವುದೇ ಸಮಸ್ಯೆಗೆ ಪರಿಹಾರವಲ್ಲ; ಮೋದಿ
 • ಮಾಡಬಲ್ಲೆ ಎಂಬ ಛಲವಿದ್ದರೆ ಸಾಧನೆ ಸಾಧ್ಯ : ಪ್ರಧಾನಿ ಮೋದಿ
 • ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ: ಕುಮಾರಸ್ವಾಮಿ ತಿರುಗೇಟು
 • ಸಂವಿಧಾನ ಅಪಾಯದ ಅಂಚಿನಲ್ಲಿದೆ : ಡಾ ಜಿ ಪರಮೇಶ್ವರ
 • ಕರೋನಾ ವೈರಸ್‌ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಕಾರ್ಯವ್ಯವಸ್ಥೆ
 • ರೈಲು ಅಪಘಾತ: ಪಂಜಾಬ್‍ ನಲ್ಲಿ ಜಮ್ಮು- ತಾವಿ ಎಕ್ಸ್‌ಪ್ರೆಸ್‌ನ ಎಂಜಿನ್ ಬೇರ್ಪಟ್ಟು ಒಬ್ಬ ವ್ಯಕ್ತಿ ಸಾವು
 • 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಎಸ್‍ ಎಲ್‍ ಭೈರಪ್ಪ ಆಯ್ಕೆ
 • ಮಾಜಿ ಕ್ರಿಕೆಟಿಗ ವಸಂತ್‌ಗೆ 100ರ ಸಂಭ್ರಮ : ಶುಭಾಶಯ ಕೋರಿದ ಕ್ರಿಕೆಟ್ ದಂತಕತೆ
 • ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದ ಬೌಲಿಂಗ್ ವಿಭಾಗವನ್ನು ಕೊಂಡಾಡಿದ ಕೊಹ್ಲಿ
 • ಗಣರಾಜ್ಯೋತ್ಸವದಂದು ಪ್ರಧಾನಿಗೆ ಸಂವಿಧಾನದ ಪ್ರತಿ ರವಾನಿಸಿದ ಕಾಂಗ್ರೆಸ್
 • ಮತ್ತೆ ಸಿಡಿದ ಕನ್ನಡಿಗ ರಾಹುಲ್ : ನ್ಯೂಜಿಲೆಂಡ್ ಎದುರು ಭಾರತಕ್ಕೆ ಎರಡನೇ ಜಯ
 • 100 ಪದವಿ ಪೂರ್ವ ವಸತಿ ಕಾಲೇಜುಗಳ‌ ಸ್ಥಾಪನೆ: ಗೋವಿಂದ ‌ಕಾರಜೋಳ
Health -Lifestyle Share

ಹದಿಹರಯದ ಹೆಣ್ಣುಮಕ್ಕಳ ಮಾಸಿಕ ಋತುಸ್ರಾವದ ಆರೋಗ್ಯಕ್ಕಾಗಿ ರಾಜ್ಯಗಳ ಮೂಲಕ ಕೇಂದ್ರ ಸರ್ಕಾರದ ಸಹಕಾರ

ಹದಿಹರಯದ ಹೆಣ್ಣುಮಕ್ಕಳ ಮಾಸಿಕ ಋತುಸ್ರಾವದ ಆರೋಗ್ಯಕ್ಕಾಗಿ ರಾಜ್ಯಗಳ ಮೂಲಕ ಕೇಂದ್ರ ಸರ್ಕಾರದ ಸಹಕಾರ
ಹದಿಹರಯದ ಹೆಣ್ಣುಮಕ್ಕಳ ಮಾಸಿಕ ಋತುಸ್ರಾವದ ಆರೋಗ್ಯಕ್ಕಾಗಿ ರಾಜ್ಯಗಳ ಮೂಲಕ ಕೇಂದ್ರ ಸರ್ಕಾರದ ಸಹಕಾರ

ನವದೆಹಲಿ, ಜುಲೈ 14 (ಯುಎನ್ಐ) ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹದಿಹರಯದ ಹೆಣ್ಣುಮಕ್ಕಳ ಮಾಸಿಕ ಋತುಸ್ರಾವದ ಆರೋಗ್ಯಕ್ಕಾಗಿ ಸಹಕರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ

ಹದಿಹರಯದ ಹೆಣ್ಣುಮಕ್ಕಳು ಋತುಸ್ರಾವದ ಸಂದರ್ಭದಲ್ಲಿ ಕಾಪಾಡಿಕೊಳ್ಳಬೇಕಾದ ನೈರ್ಮಲ್ಯ, ಉತ್ತಮ ಗುಣಮಟ್ಟದ ಸ್ಯಾನಿಟರಿ ನ್ಯಾಪ್ ಕಿನ್ ಬಳಸುವಂತೆ, ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಅಂಶವನ್ನು ಕೇಂದ್ರ ಸರ್ಕಾರದ ಯೋಜನೆ ಒಳಗೊಂಡಿದೆ ಎಂದು ಕೇಂದ್ರ ಆರೋಗ್ಯ

ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ

ಋತುಸ್ರಾವದ ಸಂದರ್ಭದಲ್ಲಿ ದೇಹದ ನೈರ್ಮಲ್ಯ ಹಾಗೂ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಸ್ಯಾನಿಟರಿ ನ್ಯಾಪ್ ಕಿನ್ ಗಳ ಸುರಕ್ಷಿತ ವಿಲೇವಾರಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ‘ಆಶಾ’ ಕಾರ್ಯಕರ್ತೆಯರು ಪ್ರತಿ ತಿಂಗಳು ಹದಿಹರಯದ ಹೆಣ್ಣುಮಕ್ಕಳ ಜೊತೆ ಸಭೆ ನಡೆಸಲಿದ್ದಾರೆ. ಇದಕ್ಕೆ ಅಗತ್ಯ ಆರ್ಥಿಕ ನೆರವು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸ್ಯಾನಿಟರಿ ನ್ಯಾಪ್ ಕಿನ್ ಗಳ ಖರೀದಿ, ಐಇಅಸಿ-ಬಿಸಿಸಿ ಚಟುವಟಿಕೆಗಳಿಗಾಗಿ ಕಾರ್ಯಕ್ರಮ ಅನುಷ್ಠಾನ ಯೋಜನೆಗಳ ಮೂಲಕ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗ ಕೇಂದ್ರ ಸರ್ಕಾರ ಆರ್ಥಿಕ ನೆರವು ಒದಗಿಸಲಿದೆ ಎಂದು ತಿಳಿಸಿದ್ದಾರೆ

ಆರೋಗ್ಯದ ವಿಷಯವು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ. ಸರ್ಕಾರೇತರ ಸಂಸ್ಥೆಗಳು ಅಥವಾ ಯಾವುದೇ ಖಾಸಗಿ ಸಂಘಟನೆಗಳನ್ನು ಬಳಸಿಕೊಳ್ಳುವುದು, ಬಿಡುವುದು ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ತೀರ್ಮಾನಕ್ಕೆ ಒಳಪಟ್ಟಿದೆ.

ಯುಎನ್ಐ ಎಸ್ಎ ಆರ್ ಕೆ 1237