Sunday, Mar 29 2020 | Time 00:20 Hrs(IST)
National Share

ಹಿಂಗಾರು ಬೆಳೆಗಳ ಪ್ರಮಾಣ ಶೇ. 35.19 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಳ

ನವದೆಹಲಿ, ಡಿ 31 (ಯುಎನ್ಐ) ಪ್ರಸಕ್ತ ಸಾಲಿನಲ್ಲಿ ಹಿಂಗಾರು ಹಂಗಾಮಿನ ಬೆಳೆಗಳ ಉಳುಮೆ ಪ್ರಮಾಣ ಹೆಚ್ಚಾಗಿದ್ದು, ಡಿ. 27ರವರೆಗೆ ಒಟ್ಟು 571. 84 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಬೆಳೆ ಆವರಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 35.9 ಲಕ್ಷ ಹೆಕ್ಟೇರ್ ಹೆಚ್ಚಾಗಿದೆ. 2018ನೇ ಸಾಲಿನಲ್ಲಿ ಇದು 536. 35 ಲಕ್ಷ ಹೆಕ್ಟೇರ್ ನಷ್ಟಿತ್ತು.
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದೆ. ಮಳೆಯ ಹೆಚ್ಚಳದಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವುದು ಹಿಂಗಾರು ಬೆಳೆಯ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ 297.02 ಲಕ್ಷ ಹೆಕ್ಟೇರ್ ನಲ್ಲಿ ಭತ್ತ, 13.90 ಲಕ್ಷ ಹೆಕ್ಟೇರ್ ನಲ್ಲಿ ಗೋದಿ, 140.13 ಲಕ್ಷ ಹೆಕ್ಟೇರ್ ನಲ್ಲಿ ಕಾಳುಗಳು, 46.66 ಲಕ್ಷ ಹೆಕ್ಟೇರ್ ನಲ್ಲಿ ಸಿರಿಧಾನ್ಯಗಳು ಮತ್ತು 74.12 ಲಕ್ಷ ಹೆಕ್ಟೇರ್ ನಲ್ಲಿ ತೈಲ ಬೀಜಗಳನ್ನು ಬೆಳೆಯಲಾಗುತ್ತದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಯುಎನ್ಐ ಎಸ್ಎಚ್ ವಿಎನ್ 1833
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..