Saturday, Mar 28 2020 | Time 23:41 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಹಿಂದೂ ಅಪ್ರಾಪ್ತ ಬಾಲಕಿಯರ ಅಪಹರಣ: ಸುರಕ್ಷಿತ ಬಿಡುಗಡೆಗೆ ಪಾಕ್‌ ಅಧಿಕಾರಿಗಳಿಗೆ ಭಾರತ ತಾಕೀತು

ನವದೆಹಲಿ, ಜನವರಿ 18 (ಯುಎನ್‌ಐ) ಇತ್ತೀಚೆಗೆ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಹಿರಿಯ ಅಧಿಕಾರಿಯನ್ನು ಕರೆಸಿಕೊಂಡ ಭಾರತ, ಈ ಬಗ್ಗೆ ಗಂಭೀರ ಕಳವಳ ಮತ್ತು ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.
ಬಾಲಕಿಯರನ್ನು ತಮ್ಮ ಕುಟುಂಬಗಳಿಗೆ 'ತಕ್ಷಣ ಸುರಕ್ಷಿತವಾಗಿ ಹಿಂದಿರುಗಿಸಬೇಕು' ಎಂದು ಭಾರತ ಕೇಳಿದೆ.
ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಶಾಂತಿ ಮೇಘವಾಡ್ ಮತ್ತು ಶರ್ಮಿ ಮೇಘವಾಡ್ ಎಂಬ ಇಬ್ಬರು ಅಪ್ರಾಪ್ತ ಬಾಲಕಿಯರನ್ನು 2020 ಜನವರಿ 14 ರಂದು ಅಪಹರಿಸಲಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ತಿಳಿಸಿವೆ.
ಅವರು ಪಾಕಿಸ್ತಾನದ ಸಿಂಧ್‌ನ ಥಾರ್‌ಪಾರ್ಕರ್‌ನ ಉಮರ್ ಗ್ರಾಮಕ್ಕೆ ಸೇರಿದವರು. ಮತ್ತೊಂದು ಘಟನೆಯಲ್ಲಿ, ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಮೆಹಕ್ ಎಂಬ ಅಪ್ರಾಪ್ತ ಬಾಲಕಿಯನ್ನು 2020 ರ ಜನವರಿ 15 ರಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಾಕೋಬಾದ್ ಜಿಲ್ಲೆಯಿಂದ ಅಪಹರಿಸಲಾಗಿದೆ ಎಂದು ಮೂಲ ಹೇಳಿದರು.
ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ "ಅಪ್ರಾಪ್ತ ಬಾಲಕಿಯರಿಗೆ ಉಂಟಾದ ಆಘಾತಕಾರಿ ಮತ್ತು ಶೋಚನೀಯ ಘಟನೆ"ಯ ಬಗ್ಗೆ ಭಾರತೀಯ ನಾಗರಿಕ ಸಮಾಜದ ವಿವಿಧ ಭಾಗಗಳಲ್ಲಿ ವ್ಯಕ್ತವಾದ ಗಂಭೀರ ಕಳವಳಗಳನ್ನು ಪಾಕಿಸ್ತಾನಕ್ಕೆ ತಿಳಿಸಲಾಗಿದೆ.
ಈ ಘಟನೆಗಳನ್ನು ತೀವ್ರವಾಗಿ ಖಂಡಿಸಲಾಗಿದ್ದು, ಬಾಲಕಿಯರನ್ನು ಸುರಕ್ಷಿತವಾಗಿ ತಮ್ಮ ಕುಟುಂಬಗಳಿಗೆ ಮರಳಿಸುವಂತೆ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಯುಎನ್ಐ ಎಎಚ್ 1054
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..