Friday, Feb 28 2020 | Time 09:16 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಹಿಮದಲ್ಲಿ ಸಿಲುಕಿದ ಯೋಧನ ನಾಪತ್ತೆ

ನವದೆಹಲಿ, ಜನವರಿ 14 (ಯುಎನ್ಐ ) ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿದ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ.
ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಎಂಬ ಯೋಧ ಹಿಮದಲ್ಲಿ ಸಿಲುಕಿದ್ದಾನೆ.

ಕಾಣೆಯಾದ ಸೈನಿಕನನ್ನು ಪತ್ತೆಹಚ್ಚಲು ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.2002 ರಿಂದ ಭಾರತೀಯ ಸೇನೆಯ 11ನೇ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೇಗಿ, ಮೂಲತಃ ಉತ್ತರಕಾಂಡದ ಡೆಹ್ರಡೂನ್ ನವರು ಎನ್ನಲಾಗಿದೆ .
ಗುಲ್ ಮಾರ್ಗ್ ಸೆಕ್ಟರ್ ನಲ್ಲಿ ಭಾರೀ ಹಿಮಪಾತವಾಗುತ್ತಿದ್ದು ರಕ್ಷಣಾ ಕಾರ್ಯಕ್ಕೆ ತೊಡಕಾಗುತ್ತಿದೆ.
ಯುಎನ್ಐ ಕೆಎಸ್ಆರ್ 0841