Friday, Dec 6 2019 | Time 21:07 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Special Share

ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ

ಶಿಮ್ಲಾ, ಜುಲೈ 22 (ಯುಎನ್ಐ) ಮಾಜಿ ಗುಜರಾತ್ ರಾಜ್ಯಪಾಲರಾದ ಕಲ್ ರಾಜ್ ಮಿಶ್ರಾ ಅವರು ಸೋಮವಾರ ಹಿಮಾಚಲ ಪ್ರದೇಶದ 26ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ. ರಾಮಸುಬ್ರಹ್ಮಣಿಯನ್ ಪ್ರಮಾಣವಚನ ಬೋಧಿಸಿದರು. ಇದಕ್ಕೂ ಮುನ್ನ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿ.ಕೆ.ಅಗರ್ ವಾಲ್ ಅವರು ರಾಷ್ಟ್ರಪತಿಗಳ ಸಹಿಯುಳ್ಳ ನೇಮಕಾತಿಯ ಆದೇಶ ಓದಿದರು.
ಸಮಾರಂಭದಲ್ಲಿ ರಾಜ್ಯದ ಮೊದಲ ಮಹಿಳೆ ಸತ್ಯವತಿ ಮಿಶ್ರ, ಮುಖ್ಯ ಮಂತ್ರಿ ಜೈ ರಾಮ್ ಠಾಕೂರ್, ಅವರ ಪತ್ನಿ ಡಾ.ಸಾಧನಾ ಠಾಕೂರ್, ಪಂಜಾಬ್ ರಾಜ್ಯಪಾಲರಾದ ವಿ.ಪಿ.ಸಿಂಗ್ ಬದನೂರು, ವಿಧಾನಸಭಾ ಸ್ಪೀಕರ್ ಡಾ.ರಾಜೀವ್ ಬಿಂದಲ್, ಮಾಜಿ ಮುಖ್ಯಮಂತ್ರಿಗಳಾದ ವಿದರ್ಭ ಸಿಂಗ್ ಹಾಗೂ ಪ್ರೇಮ್ ಕುಮಾರ್ ಧುಮಾಲ್ ಸೇರಿದಂತೆ ಹಲವು ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.
1941ರ ಜುಲೈ 1ರಂದು ಸೌದ್ ಪುರ ಪ್ರಾಂತ್ಯದಲ್ಲಿ ಜನಿಸಿದ ಮಿಶ್ರಾ, 2010ರಿಂದ 2012ರವರೆಗೆ ಬಿಜೆಪಿ ರಾಜ್ಯ ಸಮಿತಿಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದು, 1978, 2001 ಹಾಗೂ 2006ರಲ್ಲಿ ರಾಜ್ಯಸಭಾ ಸದಸ್ಯರಾಗಿ 2014ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ, ಸಚಿವ ಸಂಪುಟದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಬಿಜೆಪಿಯ ಯುವ ಮೋರ್ಚಾದ ಮೊದಲ ಚುನಾಯಿತ ಅಧ್ಯಕ್ಷರಾಗಿದ್ದಾರೆ.
ಇವರು ಇತ್ತೀಚೆಗಷ್ಟೇ ಗುಜರಾತ್ ರಾಜ್ಯಪಾಲರಾಗಿ ವರ್ಗಾವಣೆಗೊಂಡ ಅಚಾರ್ಯ ದೇವ್ ವ್ರತ್ ಅವರಿಂದ ತೆರವಾದ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಯುಎನ್ಐ ಎಸ್ಎಚ್ ಕೆಎಸ್ ವಿ 1944