Wednesday, Feb 26 2020 | Time 09:45 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಹಿರಿಯ ನಾಗರಿಕರಿಗೆ ಸಿಎಂ ಕೇಜ್ರಿವಾಲ್ ಹೊಸ ಗಾಳ, ಮೋಡಿ.!!

ನವದೆಹಲಿ, ಜನವರಿ 24 (ಯುಎನ್‌ಐ) ಜನರ ಕಲ್ಯಾಣಕ್ಕಾಗಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಲು ಮತ್ತೊಮ್ಮೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮತ ಚಲಾಯಿಸಿ, ಅಧಿಕಾರ ನೀಡಬೇಕೆಂದು ಹಿರಿಯ ನಾಗರಿಕರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೊಸ ಗಾಳ , ಹೊಸ ಮೋಡಿ ಮಾಡಿದ್ದಾರೆ.
"ಅವರ ಹಿರಿಯ ಮಗ ದೆಹಲಿಯ ಹಿರಿಯರಿಗೆ ಸಂದೇಶ" ಎಂದು ಬರೆದಿದ್ದು, ಟ್ವಿಟ್ಟರ್ ಹ್ಯಾಂಡಲ್ ಮೂಲಕ ಸಿಎಂ ಹಿರಿಯ ನಾಗರಿಕರ ಮತ ಕಬಳಿಕೆಗಾಗಿಯೇ ವಿಡಿಯೋ ಸಹ ಬಿಡುಗಡೆ ಮಾಡಿದ್ದಾರೆ.
ಹಿರಿಯ ನಾಗರಿಕರಿಗೆ ತಮ್ಮ ಜವಾಬ್ದಾರಿಗಳಿಂದ ವಿರಾಮದ ನಂತರ ‘ಮುಖಮಂತ್ರಿ ತೀರ್ಥ ಯಾತ್ರೆ ಯೋಜನೆ’ ಅಡಿಯಲ್ಲಿ ತೀರ್ಥಯಾತ್ರೆ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ವೀಡಿಯೊ ಸಂದೇಶವು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಜನರನ್ನು ತಲುಪಲಿದೆ.ತಮ್ಮ ವೀಡಿಯೊದಲ್ಲಿ ಹಿರಿಯ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ಕಳೆದ ಐವತ್ತು-ಅರವತ್ತು ವರ್ಷಗಳಲ್ಲಿ ನೀವು ಅನೇಕ ಏರಿಳಿತ ನೋಡಿದ್ದೀರಿ. ನಿಮ್ಮ ಮಕ್ಕಳನ್ನು ಬೆಳೆಸುವಲ್ಲಿ ನಿಮ್ಮ ಜೀವನವು ಸಾಕು ಸಾಕಾಗಿ ಹೋಗಿದೆ.

ಮಕ್ಕಳನ್ನು ಬೆಳೆಸುವಲ್ಲಿ ಮತ್ತು ಅವರ ಸ್ವಂತ ಕಾಲುಗಳ ಮೇಲೆ ನಿಲ್ಲುವಂತೆ ಮಾಡುವಲ್ಲಿ ನೀವು ಎದುರಿಸಬೇಕಾದ ಕಷ್ಟವನ್ನು ನಾನು ಊಹಿಸಬಲ್ಲೆ ನಿಮಗಾಗಿ ಒಂದು ನಿಮಿಷ ಸಹ ಉಳಿದಿಲ್ಲ. ನಿಮ್ಮ ಮಕ್ಕಳನ್ನು ನೋಡಿಕೊಳ್ಳುವಲ್ಲಿಯೇ ನಿಮ್ಮ ಇಡೀ ಜೀವನವು ಕಳೆದಿದೆ, ಮತ್ತು ಈಗ ಅದು ನಿಮ್ಮ ಮೊಮ್ಮಕ್ಕಳನ್ನು ನೋಡಿಕೊಳ್ಳುವಲ್ಲಿ ಹಾದು ಹೋಗುತ್ತಿದೆ. ಈಗ, ರಜೆ ,ವಿರಾಮ, ವಿಶ್ರಾಂತಿ ಅಗತ್ಯವಿದೆ ಎಂದೂ ಒತ್ತಿ ಹೇಳಿದ್ದಾರೆ.
“ನಿಮ್ಮ ತೀರ್ಥಯಾತ್ರೆಗೆ ನಾವು ಸಂಪೂರ್ಣ ವ್ಯವಸ್ಥೆ ಮಾಡಿದ್ದೇವೆ. ಈಗ, ನಿಮ್ಮನ್ನು ತೀರ್ಥಯಾತ್ರೆಗೆ ಕರೆದೊಯ್ಯುವುದು ಸರ್ಕಾರದ ಜವಾಬ್ದಾರಿಯಾಗಿದೆ, ನಿಮ್ಮ ಆರಾಮದಾಯಕ ವಾಸ್ತವ್ಯ ಮತ್ತು ಆಹಾರಕ್ಕಾಗಿ ಸರ್ಕಾರ ನಿಮಗಾಗಿ ಎಲ್ಲ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದಾರೆ.

ನೀವು ಎಸಿ ರೈಲಿನಲ್ಲಿ ಪ್ರಯಾಣಿಸುತ್ತೀರಿ, ಉತ್ತಮ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿ ಮತ್ತು ಸರ್ಕಾರವು ಈ ಎಲ್ಲ ಖರ್ಚು, ವೆಚ್ಚ ಭರಿಸಲಿದೆ . ನೀವು ಯಾವುದರ ಬಗ್ಗೆಯೂ ಚಿಂತಿಸಬೇಕಾಗಿಲ್ಲ,ಎಂದೂ ಅವರು ಭರವಸೆ ನೀಡಿದ್ದಾರೆ
ಸುಮಾರು 40,ಸಾವಿರ ಹಿರಿಯ ನಾಗರಿಕರು ತೀರ್ಥಯಾತ್ರೆ ಮಾಡಿದ್ದು, ಅವರು ತುಂಬಾ ಸಂತೋಷವಾಗಿದ್ದಾರೆ ಎಂದೂ ಕೇಜ್ರಿವಾಲ್ ಹೇಳಿದರು.
ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸರ್ಕಾರ ಎಲ್ಲ ಮೊಹಲ್ಲಾ ಗಳಲ್ಲಿ ಚಿಕಿತ್ಸಾಲಯಗಳನ್ನು ತೆರೆದಿದೆ ಎಂದು ಅವರು ಹೇಳಿದರು.
ಯುಎನ್ಐ ಕೆಎಸ್ಆರ್ 2106