Wednesday, Feb 26 2020 | Time 09:35 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಹೊಸ ವರ್ಷದಲ್ಲಿ ಮೋದಿ ಸರ್ಕಾರದ ವಿರುದ್ಧ ನಿರ್ಣಯವಿರಲಿ: ಕಾಂಗ್ರೆಸ್

ನವದೆಹಲಿ, ಜ 01 (ಯುಎನ್‍ಐ) ಹೊಸ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತತೃತ್ವ ವಿರುದ್ಧ ನಿರ್ಣಯಕ್ಕೆ ಕಾಂಗ್ರೆಸ್ ತಿಳಿಸಿದೆ

ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಟ್ವೀಟ್ ಮಾಡಿರುವ ಕಾಂಗ್ರೆಸ್, '' ಈ ಹೊಸ ವರ್ಷವು ನಮಗೆ ಶಾಂತಿ, ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ. ನಾವು ತೆಗೆದುಕೊಳ್ಳಬೇಕಾದ ಹೊಸ ವರ್ಷದ ನಿರ್ಣಯವೆಂದರೆ ಈ ಸರ್ಕಾರದ ವಿರುದ್ಧ ಧ್ವನಿ ಎತ್ತುವುದು. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತೇವೆ. '' ಎಂದು ಹೇಳಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಹೊಸ ವರ್ಷದ ಶುಭಾಶಯಗಳನ್ನು ತಿಳಿಸುವಾಗ ಯಾವುದೇ 'ರಾಜಕೀಯ' ಹೇಳಿಕೆಗಳನ್ನು ನೀಡಿಲ್ಲ.

ಪ್ರತಿಯೊಬ್ಬರಿಗೂ ಹೊಸ ವರ್ಷದ ಶುಭಾಶಯಗಳು. ಅದ್ಭುತ ವರ್ಷ, '' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ವಾದ್ರಾ ಸಹ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಟ್ವಿಟರ್ ಮೂಲಕ ಹೇಳಿದ್ದಾರೆ.
ಆದಾಗ್ಯೂ, ಪಕ್ಷದ ಹಿರಿಯ ಮುಖಂಡ ಅಹ್ಮದ್ ಪಟೇಲ್, "2020 ಪುನರುತ್ಥಾನವನ್ನು ಕಾಣಲಿದೆ ಮತ್ತು ಸಂವಿಧಾನ ಪರ ಮತ್ತು ಭಾರತ ಪರ ಶಕ್ತಿಗಳ ಒಗ್ಗೂಡಿ ಈ ಸರ್ಕಾರದ ಭಾರತೀಯ ವಿರೋಧಿ ರಾಜಕೀಯವನ್ನು ಸೋಲಿಸುತ್ತದೆ" ಎಂದು ಎಚ್ಚರಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿಯತ್ತ ಗಮನಸೆಳೆದ ಪಟೇಲ್, "ನಾವು ಕಳೆದ ದಶಕವನ್ನು ಸಾಕಷ್ಟು ಆಶಾವಾದ ಮತ್ತು ಭರವಸೆಯೊಂದಿಗೆ ಪ್ರಾರಂಭಿಸಿದ್ದೇವೆ. 2009-2010ರಲ್ಲಿ ಭಾರತದ ಆರ್ಥಿಕ ಪ್ರಗತಿ ಶೇಕಡಾ 8 ಕ್ಕೆ ಬೆಳೆದಿದ್ದರೆ, ಇಂದು ನಾವು ಕೇವಲ 4 ಪ್ರತಿಶತದಷ್ಟು ಮಾತ್ರ ಇದೆ ಎಂದು ಹೇಳಿದ್ದಾರೆ.



ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಗೆ ಸಂಬಂಧಿಸಿದಂತೆ ಭಾರಿ ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ಹೊಸ ವರ್ಷ ಬಂದಿದ್ದು, ಹಲವು ರಾಜಕೀಯ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಯುಎನ್‍ಐ ಎಸ್‍ಎ ವಿಎನ್ 1317