Wednesday, Oct 20 2021 | Time 14:43 Hrs(IST)
Karnataka Share

ಜಲಜೀವನ್ ಮಿಷನ್ ಯೋಜನೆ ಜಾರಿಗೆ 2, 500 ಕೋಟಿರೂ. ಅನುದಾನ

ಬೆಂಗಳೂರು,ಸೆ15 (ಯುಎನ್ಐ ) ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಜಾರಿಗೆ ಕೇಂದ್ರ ಸರ್ಕಾರ 2500 ಕೋಟಿ ರೂಪಾಯಿ ಅನುದಾನ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಗೆ ಇಂದು ತಿಳಿಸಿದರು.
ಕಾಂಗ್ರೆಸ್ ನ ಶಿವಾನಂದ ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಜಯಪುರ ಜಿಲ್ಲೆಯಲ್ಲಿ ಜಲಧಾರೆ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಲಾಗಿದ್ದ ಕಾಮಗಾರಿಗಳನ್ನು ಜಲಜೀವನ್ ಮಿಷನ್ ಯೋಜನೆಯಡಿ ಅಳವಡಿಸಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಎರಡನೇ ಹಂತದ ಯೋಜನೆ ಅನುಷ್ಠಾನಗೊಳಿಸಲು ಇದೇ ತಿಂಗಳ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮುಂದಿನ 30 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲಾವುದು ಎಂದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಶಿವಾನಂದ ಪಾಟೀಲ್, ನಗರ ಪ್ರದೇಶಕ್ಕೆ 135 ಎಂಎಲ್ ಡಿ ಲೀಟರ್ ನೀರು ಪೂರೈಕೆ ಪೂರೈಸುತ್ತೀರಿ, ಗ್ರಾಮೀಣಾ ಭಾಗಕ್ಕೆ 55 ಎಂಎಲ್ಡಿ ನೀಡು ಒದಗಿಸಿ ತಾರತಮ್ಯ ಮಾಡಲಾಗುತ್ತಿದೆ.
ಕಡೆಯ ಪಕ್ಷ 85 ಎಂಎಲ್ಡಿ ನೀರು ಪೂರೈಸುವ ಭರವಸೆಯನ್ನು ಸರ್ಕಾರ ಈ ಹಿಂದೆ ನೀಡಿತ್ತು. ಅದನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸಚಿವ ಈಶ್ವರಪ್ಪ ಉತ್ತರ ಮುಂದುವರಿಸಿ ಬೇರೆ ಬೇರೆ ಯೋಜನೆ ಜಾರಿ ಮೂಲಕ ವಿಜಯಪುರ ಜಿಲ್ಲೆಯ ಜನತೆಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ಯುಎನ್ಐ ಕೆಎಸ್ಆರ್ 1554
More News

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 1:53 PM

 Sharesee more..

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 1:32 PM

 Sharesee more..
ತಾಯಿಯ ಕೋರಿಕೆ ನೆರವೇರಿಸಿದ ಸಚಿವ ಎಸ್ ಟಿ ಸೋಮಶೇಖರ್

ತಾಯಿಯ ಕೋರಿಕೆ ನೆರವೇರಿಸಿದ ಸಚಿವ ಎಸ್ ಟಿ ಸೋಮಶೇಖರ್

20 Oct 2021 | 11:14 AM

ಹುಟ್ಟುಹಬ್ಬಕ್ಕೆ ತಮಗೆ ಏನು ಕೊಡಬೇಕು ಎಂದು ಸಚಿವರು ತಾಯಿಯನ್ನು ಕೇಳಿಕೊಳ್ಳುತ್ತಾರೆ. ಆಗ ಅವರು ನನಗೆ ವಯಸ್ಸು 94 ಆಗುತ್ತಿದೆ. ನನಗೆ ಏನೇನು ಅವಶ್ಯಕತೆಗಳಿವೆಯೋ ಅದನ್ನೆಲ್ಲ ನೀನು ಪೂರೈಸಿದ್ದೀಯ. ಅದರೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಭಿಮಾನಿ. ಅವರನ್ನು ಒಮ್ಮೆ ಭೇಟಿ ಮಾಡಬೇಕು ಎಂದು ಕೇಳಿಕೊಳ್ಳುತ್ತಾರೆ.

 Sharesee more..