Friday, Oct 22 2021 | Time 06:47 Hrs(IST)
Special Share

ಉಪಚುನಾವಣೆ: ಎಲ್ಲರ ಚಿತ್ತ ಭವಾನಿಪುರದತ್ತ..!!

ಕೋಲ್ಕತ್ತ , ಸೆ 10 (ಯುಎನ್ಐ) ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಈಜಿ ಅವಿರತ ಹೋರಾಟ ಮಾಡಿ, ಬಂಗಾಳದ ಅಧಿಕಾರವನ್ನು ಸತತ ಮೂರನೇ ಬಾರಿಗೆ ಉಳಿಸಿಕೊಂಡಿರುವ ಮಮತಾ ಬ್ಯಾನರ್ಜಿ ಇದೀಗ ಮತ್ತೊಂದು ರಾಜಕೀಯ ಸವಾಲು ಎದುರಿಸಲು ಸಿದ್ದರಾಗಿದ್ದಾರೆ.
ಇದೇ 30ರಂದು ನಡೆಯಲಿರುವ ಉಪಚುನಾವಣೆಯ ಮೇಲೆ ದೇಶದ ಗಮನ ಹರಿದಿದೆ. ಭವಾನಿಪುರದಿಂದ ರಾಜಕೀಯ ಅದೃಷ್ಟ ಬಯಸಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಚುನಾವಣಾ ಕಣಕ್ಕೆ ಧುಮುಕುತ್ತಿದ್ದಾರೆ.
ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಿ ರಾಜಕೀಯದ ಅದೃಷ್ಟ ಪರೀಕ್ಷೆಗೆ ಒಳಗಾಗಲಿದ್ದಾರೆ.
ಸಾರ್ವಜನಿಕ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು . ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲ್ಲುವುದು ಮಮತಾ ಪಾಲಿಗೆ ರಾಜಕೀಯ ವಾಗಿ ಅನಿವಾರ್ಯವಾಗಲಿದೆ. ಬಿಜೆಪಿ ಸೋಲಿಸುವ ಉದ್ದೇಶದಿಂದ ಮಮತಾ ವಿರುದ್ಧ ಅಭ್ಯರ್ಥಿ ಹಾಕದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ಮುಂದಿನ ತಿಂಗಳ 3ರಂದು ಫಲಿತಾಂಶ ಹೊರಬೀಳಲಿದೆ.
ಬಿಜೆಪಿ ಕೂಡ ಹುರಿಯಾಳುಗಳ ಪಟ್ಟಿಯನ್ನು ತಾತ್ಕಾಲಿಕವಾಗಿ ಸಿದ್ದಪಡಿಸಿದ್ದು ಇನ್ನೂ ಒಂದೆರಡು ದಿನದಲ್ಲಿ ಅಭ್ಯರ್ಥಿಯನ್ನು ಅಖೈರುಗೊಳಿಸಲಿದೆ.
ಯುಎನ್ಐ ಕೆಎಸ್ಆರ್ 1019
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..