Wednesday, Oct 20 2021 | Time 15:20 Hrs(IST)
Karnataka Share

ಪಕ್ಷದ ಶಾಸಕರು ಒಗ್ಗಟ್ಟು ಪ್ರದರ್ಶಿಸಲು ಸೂಚನೆ

ಬೆಂಗಳೂರು,ಸೆ.13(ಯುಎನ್ಐ)ಅಧಿವೇಶನದಲ್ಲಿ‌ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದ್ದು, ಪ್ರತಿಪಕ್ಷಗಳ ವಿರೋಧವನ್ನು ಒಗ್ಗಟ್ಟಿನಿಂದ ಎದುರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.ಇದರೊಂದಿಗೆ ಪ್ರತಿಮಂಗಳವಾರ ಪಕ್ಷ‌ ಸಂಘಟನೆ ದೃಷ್ಟಿಯಿಂದ ಬಿಜೆಪಿ ಶಾಸಕಾಂಗ ಸಭೆ ನಡೆಸಲು
ಸೋಮವಾರ ರಾತ್ರಿ ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದ್ದರೆ ಶಾಸಕಾಂಗ ಪಕ್ಷದ ಸಭೆಯಲ್ಲೇ ಚರ್ಚಿಸಲು ನಿರ್ಧರಿಸಲಾಗಿದೆ. ಶಾಸಕರು ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಲು ಸೂಚಿಸಲಾಗಿದೆ.
ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಲು ಸಿದ್ದತೆ ನಡೆಸಿದ್ದು, ಆದರೆ ಯುಪಿಎ ಅವಧಿಯಲ್ಲಿಯೂ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗಿತ್ತು ಎನ್ನುವುದನ್ನು ಎಲ್ಲರೂ ಒಟ್ಟಾಗಿ ತಿರುಗೇಟು ನೀಡುವಂತೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅಧಿವೇಶನದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ, ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಶಾಸಕರಿಗೆ ಸೂಚಿಸಿದ್ದಾರೆನ್ನಲಾಗಿದೆ.
ಸಚಿವರು ಹಾಗೂ ಶಾಸಕರಿಗೆ ಸಿಗದಿರುವ ಬಗ್ಗೆ ಹಲವು ಶಾಸಕರು ಸಭೆಯಲ್ಲಿ ಆಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿ ಗುರುವಾರ ಶಾಸಕರಿಗೆ ಲಭ್ಯವಿರುತ್ತಾರೆ. ಅದರಂತೆ ಸಚಿವರುಗಳೂ ಕೂಡ ಶಾಸಕರಿಗೆ ಲಭ್ಯವಾಗಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಾಮಿ, ಈ ಅಧಿವೇಶನದಲ್ಲಿ ಮಂಡನೆಯಾಗುತ್ತಿರುವ ವಿಧೇಯಕಗಳ ಬಗ್ಗೆ ಶಾಸಕರಿಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದ್ದು, ಡೀಮ್‌ಡ್‌ ಫಾರೆಸ್‌ಟ್‌ ಹಾಗೂ ಇ-ಸ್ವತ್ತು ವಿಧೇಯಕಗಳ ಬಗ್ಗೆ ಶಾಸಕರು ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ಕಾಯ್ದೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕಾಂಗ ಪಕ್ಷದ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಧಿವೇಶನದಲ್ಲಿ ಹೇಗೆ ನಿಭಾಯಿಸಬೇಕೆಂಬ ಚರ್ಚೆ ಆಗಿದೆ. ಶಾಸನ ಸಭೆಯಲ್ಲಿ ಬರಬಹುದಾದ ವಿಧೇಕಗಳ ಬಗ್ಗೆ ಅನುಮಾನಗಳನ್ನು ಬಗೆಹರಿಸಿಕೊಳ್ಳಲಾಗಿದೆ. ಶಾಸಸ ಸಭೆಗಳಲ್ಲಿ ಎಲ್ಲರೂ ಭಾಗವಹಿಸಲು ಸೂಚಿಸಲಾಗಿದೆ. ಅಧಿವೇಶನ ವೇಳೆ ಪ್ರತಿ ಮಂಗಳವಾರ ಪಕ್ಷದ ಶಾಸಕಾಂಗ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಬೆಳಗ್ಗೆ 9.30 ರಿಂದ 11 ರೊಳಗೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ಮಂಗಳವಾರ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ ಎಂದರು.
ಶಾಸಕರ ಅಹವಾಲು ಕೇಳಲು ಪ್ರತಿ ಗುರುವಾರ ಸಿಎಂ ಸಮಯ ನಿಗದಿಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಎಂ ಅವರು ಪ್ರತಿ ಗುರುವಾರ ಶಾಸಕರ ಅಹವಾಲು ಕೇಳಲಿದ್ದಾರೆ. ಪ್ರತಿ ಗುರುವಾರ ಶಾಸಕರು ಸಿಎಂ ಭೇಟಿ ಮಾಡಿ ಮನವಿ, ಅಹವಾಲು ಕೊಡಬಹುದು. ನಗರದ ಎಲ್ಲ ಯೋಜನೆಗಳನ್ನು ಅನುಷ್ಠಾಾನಗೊಳಿಸಲು ಒಂದೇ ಯೋಜನಾ ಸಮಿತಿ ಮಾಡಲು ಚರ್ಚೆ ನಡೆಸಲಾಗಿದೆ. ಒಂದೇ ಇಲಾಖೆಯಡಿ ನಗರದ ಯೋಜನೆಗಳನ್ನು ತರುವ ಬಗ್ಗೆ ವಿಧೇಯಕ ತರುವ ಬಗ್ಗೆ ಚರ್ಚೆ ಆಯಿತು. ಶಿಕ್ಷಕರ ವರ್ಗಾವಣೆ ಸಂಬಂಧ ತಿದ್ದುಪಡಿ ವಿಧೇಯಕ ಬಗ್ಗೆಯೂ ಚರ್ಚೆ ಆಗಿದೆ. ವಿಧೇಯಕಗಳ ವಿಚಾರದಲ್ಲಿ ಶಾಸಕರ ಗೊಂದಲ ಬಗ್ಗೆ ಚರ್ಚಿಸಿರುವುದಾಗಿ ಹೇಳಿದರು.
ಶಾಸಕಾಂಗ ಪಕ್ಷದ ಸಭೆಯಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ತಡೆ ವಿಧೇಯಕ, ಜಿ.ಪಂ., ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಆಯೋಗವೇ ಮೀಸಲಾತಿ ಹಂಚಿಕೆಯೂ ಮಾಡಲಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಒಬ್ಬರನ್ನು ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲು ಚಿಂತನೆ ನಡೆಸಲಾಗಿದೆ. ಜೈಲುಗಳ ಸುಧಾರಣೆ ಬಗ್ಗೆ ಚರ್ಚೆ ಆಗಿದೆ.ಶಾಸಕರ ಕ್ಷೇತ್ರ, ಅನುದಾನ ಸಮಸ್ಯೆ ಬಗ್ಗೆ ಚರ್ಚೆ ಆಗಲಿಲ್ಲ ಎಂದರು. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಪಾಲಿಕೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುವ ವಿಶ್ವಾಸವಿರುವುದಾಗಿ ಮಾಧುಸ್ವಾಮಿ ಹೇಳಿದರು.
ಯುಎನ್ಐ ಯುಎಲ್, 2222
More News
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..