Wednesday, Oct 20 2021 | Time 15:41 Hrs(IST)
Karnataka Share

ಮರಾಠ ಅಭಿವೃದ್ಧಿ ಮಂಡಳಿಗೆ‌ ಅಧ್ಯಕ್ಷರನ್ನು ನೇಮಿಸಿ

ಬೆಂಗಳೂರು,ಆ.29(ಯುಎನ್‌ಐ):ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮರಾಠ ಅಭಿವೃದ್ಧಿ ಮಂಡಳಿಯನ್ನೇನೋ ಘೋಷಿಸಿದರಾದರೂ ಅದಕ್ಕಿನ್ನೂ ಅಧ್ಯಕ್ಷರ ನೇಮಕವಾಗಿಲ್ಲ.
ಹೀಗಾಗಿ ಆದಷ್ಟು ಬೇಗ ಮರಾಠ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ ಎಂದು ಕ್ಷತ್ರಿಯ ಮರಾಠ ಮಹಾ ಒಕ್ಕೂಟ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.
ಇನ್ನು ಮರಾಠ ಅಭಿವೃದ್ಧಿ ಮಂಡಳಿಯನ್ನು ಪ್ರವರ್ಗ 2-ಎಗೆ ಸೇರಿಸುವಂತೆಯೂ ಸಮುದಾಯದ ಶ್ರೀಮಂತ ಪಾಟೀಲ್‌ರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ನೇತೃತ್ವದಲ್ಲಿ ಮರಾಠ ಸಮುದಾಯದ ಮುಖಂಡರನ್ನು ಭೇಟಿ‌ ಮಾಡಿದ
ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಪದಾಧಿಕಾರಿಗಳು,ಮರಾಠ ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪ್ರವರ್ಗ 2ಎ ಮೀಸಲಾತಿ ಒದಗಿಸುವಂತೆ ಮನವಿ ಮಾಡಿದರು.ಅಲ್ಲದೇ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮರಾಠ ಅಭಿವೃದ್ಧಿ ಮಂಡಳಿ ರಚನೆ ಮಾಡುವುದಾಗಿ ಆದೇಶ ಮಾಡಿದ್ದಾರೆ‌.ಆದರೆ ಇದುವರೆಗೂ ಅಧ್ಯಕ್ಷರ ನೇಮಕ ಮಾಡಿಲ್ಲ. ಮಂಡಳಿಗೆ 50 ಕೋಟಿ ರೂ. ಮೀಸಲಿಡುವುದಾಗಿ ಹೇಳಿದ್ದರು. ಆದರೆ, ಕನಿಷ್ಠ 250 ಕೋಟಿ ರೂ. ಮೀಸಲಿಡುವಂತೆ ಮನವಿ ಮಾಡಿದ್ದಾರೆ.
ಛತ್ರಪತಿ ಶಿವಾಜಿ ತಂದೆ ಶಾಹಜಿ ಮತ್ತು ಸಂಭಾಜಿ ಸಮಾಧಿ ಸ್ಥಳಗಳ ಅಭಿವೃದ್ದಿ ಪಡಿಸುವುದು ಸೇರಿದಂತೆ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ.
ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ರಾಜ್ಯಾಾಧ್ಯಕ್ಷ ಶ್ಯಾಮ್‌ಸುಂದರ್ ಗಾಯಕವಾಡ್,ಸಮುದಾಯದ ಬೇಡಿಕೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾಾರೆ ಎಂದು ತಿಳಿಸಿದ್ದಾರೆ.
ಯುಎನ್ಐ ಯುಎಲ್, 2245
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..