Friday, Oct 22 2021 | Time 06:35 Hrs(IST)
Special Share

ಮಹಿಳಾ ನ್ಯಾಯಮೂರ್ತಿಗಳ ನೇಮಕ, ರಾಷ್ಟ್ರಪತಿ ಹರ್ಷ

ಲಕ್ನೋ, ಸೆ 11(ಯುಎನ್‌ ಐ) - ಸುಪ್ರೀಂ ಕೋರ್ಟ್‌ ಗೆ ಹೊಸದಾಗಿ ಮೂವರು ಮಹಿಳಾ ನ್ಯಾಯಮೂರ್ತಿಗಳು ನೇಮಕಗೊಂಡಿರುವುದಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಹೊಸ ನೇಮಕದಿಂದಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಸ್ಮರಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ಇಷ್ಟು ಮಂದಿ ಮಹಿಳಾ ನ್ಯಾಯಮೂರ್ತಿ ಇರುವುದು ಇದೇ ಮೊದಲು, ಈ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.
ಶನಿವಾರ ಮಧ್ಯಾಹ್ನ ಪ್ರಯಾಗ್‌ ರಾಜ್‌ ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಶಿಲಾನ್ಯಾಸ ಸಮಾರಂಭದಲ್ಲಿ ರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ನಂತರ ಅಲಹಾಬಾದ್ ಕೋರ್ಟ್‌ ಬಳಿ ನಡೆದ ಸಭೆಯಲ್ಲಿ ಮಾತನಾಡುತ್ತಾ.. ನ್ಯಾಯಾಲಯಗಳಲ್ಲಿ ಮಹಿಳಾ ನ್ಯಾಯಮೂರ್ತಿಗಳ ಮಹತ್ವವನ್ನು ವಿವರಿಸಿದರು. ಭಾರತದ ಮೊದಲ ಮಹಿಳಾ ವಕೀಲೆ (1921) ಕಾರ್ನೆಲಿಯೊ ನೊರಾಬ್ಜಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಕೆಲಸ ಮಾಡಿದ್ದರು, ಮಹಿಳಾ ಸಬಲೀಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಕೈಗೊಂಡಿರುವ ನಿರ್ಧಾರಗಳನ್ನು ರಾಷ್ಟ್ರಪತಿ ಶ್ಲಾಘಿಸಿದರು.
ಯುಎನ್‌ ಐ ಕೆವಿಆರ್‌ 1527
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..