Friday, Oct 22 2021 | Time 05:01 Hrs(IST)
Special Share

ಸತೀಶ್ ಚಂದ್ರ ಶರ್ಮ ತೆಲಂಗಾಣ ಹೈಕೋರ್ಟ್‌ ಸಿಜೆ

ನವದೆಹಲಿ, ಸೆ 17(ಯುಎನ್‌ ಐ) ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಸತೀಶ್ ಚಂದ್ರಶರ್ಮಾ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಅವರು ಪ್ರಸ್ತುತ ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿದ್ದ ಹಿಮಾ ಕೋಹ್ಲಿ ಅವರು ಇತ್ತೀಚಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸ್ತುತ ತಾತ್ಕಾಲಿಕ ಮುಖ್ಯನ್ಯಾಯಮೂರ್ತಿಯಾಗಿ ರಾಮಚಂದ್ರ ರಾವ್ ಮುಂದುವರಿದಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಲಾಗಿದೆ. ಅಂಧ್ರ ಪ್ರದೇಶ ಹೈಕೋರ್ಟ್‌ ಸಿಜೆಯಾಗಿ ಜಸ್ಟೀಸ್‌ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ನೇಮಿಸಲು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.
ಯುಎನ್‌ ಐ ಕೆವಿಆರ್‌ 1530
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..