Friday, Oct 22 2021 | Time 07:02 Hrs(IST)
Special Share

ದೇಶದಲ್ಲಿ 30,773 ಕೊರೊನಾ ಪಾಸಿಟಿವ್‌ ಪ್ರಕರಣಗಳು, 309 ಸಾವು

ನವದೆಹಲಿ, ಸೆ 19(ಯುಎನ್‌ ಐ)- ದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖಗೊಳ್ಳುತ್ತಿದೆ. ನಿತ್ಯ ವರದಿಯಾಗುತ್ತಿರುವ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 30,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈ ಹಿಂದೆ 25,000 ಕ್ಕೆ ಕುಸಿದಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳು ಕಳೆದ ಎರಡು ದಿನಗಳಿಂದ 35,000 ಕ್ಕಿಂತ ಹೆಚ್ಚು ವರದಿಯಾಗಿದ್ದವು. ಹೊಸದಾಗಿ 31,000 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಮೂರನೇ ಅಲೆ ಅನಿವಾರ್ಯ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಿರುವ ನಡುವೆಯೇ ಕೊರೊನಾ ಪ್ರಕರಣಗಳು ಇಳಿಮುಖವಾಗಿರುವುದು ನೆಮ್ಮದಿ ತರಿಸಿದೆ.
ದೇಶಾದ್ಯಂತ, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 30,773 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅದೇ ಸಮಯದಲ್ಲಿ 309 ಜನರು ಕೊರೊನಾ ಕಾರಣದಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 38,945 ಮಂದಿ ಚೇತರಿಸಿಕೊಂಡಿದ್ದು, ದೇಶದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,34,48,163. ಈ ಪೈಕಿ 3,26,71,167 ಜನರು ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 4,44,838 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158 ರಷ್ಟಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತವಾಗಿ ಹೇಳಿದೆ.
ಯುಎನ್‌ ಐ ಕೆವಿಆರ್‌ 11 12
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..