Monday, Sep 20 2021 | Time 07:55 Hrs(IST)
National Share

ದೇಶದಲ್ಲಿ 41,806 ಹೊಸ ಕೊರೋನ ಪ್ರಕರಣ, 581 ಸಾವು

ದೇಶದಲ್ಲಿ 41,806 ಹೊಸ ಕೊರೋನ ಪ್ರಕರಣ, 581 ಸಾವು
ದೇಶದಲ್ಲಿ 41,806 ಹೊಸ ಕೊರೋನ ಪ್ರಕರಣ, 581 ಸಾವು

ನವದೆಹಲಿ, ಜುಲೈ 15 (ಯುಎನ್ಐ ) ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,806 ಹೊಸ ಕೊರೋನ ಸೋಂಕು ಪ್ರಕರಣಗಳು,ಹಾಗೂ 581 ಸಾವಿನ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,09,87,880 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 581 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ 39,130 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೊರೊನಾದಿಂದ 3,01,43,850 ಜನರು ಈವರೆಗೆ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಇಲ್ಲಿಯವರೆಗೆ, 39,13,40,491 ಜನರಿಗೆ ಕೊರೋನ ಲಸಿಕೆಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ 34,97,058 ಜನರಿಗೆ ಲಸಿಕೆ ಹಾಕಲಾಗಿದೆ ಎಂದೂ ಇಲಾಖೆ ವರದಿ ಹೇಳಿದೆ.

ಯುಎನ್ಐ ಕೆಎಸ್ಆರ್ 0954