Friday, Oct 22 2021 | Time 05:10 Hrs(IST)
Special Share

ದೆಹಲಿ : ಕಟ್ಟಡ ಕುಸಿದು ಮಕ್ಕಳಿಬ್ಬರ ಸಾವು

ನವದೆಹಲಿ, ಸೆ. 13 (ಯುಎನ್ಐ) ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಸೋಮವಾರ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಿಬ್ಬರೂ ಒಡಹುಟ್ಟಿದವರಾಗಿದ್ದು, 8 ಮತ್ತು 14 ವರ್ಷ ವಯಸ್ಸಿನವರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಬಾರಾ ಹಿಂದೂ ರಾವ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೆ, ಕುಸಿದ ಕಟ್ಟಡದ ಪಕ್ಕದಲ್ಲಿ ಅಂಗಡಿಯೊಂದನ್ನು ಹೊಂದಿರುವ 72 ವರ್ಷದ ವ್ಯಕ್ತಿ ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಮಕ್ಕಳಿಬ್ಬರೂ ಕಟ್ಟಡದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ತಂಡಗಳು ಶೋಧ ನಡೆಸುತ್ತಿವೆ. ಕುಸಿದ ಕಟ್ಟಡದಲ್ಲಿ 6 ಸದಸ್ಯರ ಕುಟುಂಬವಿತ್ತು ಎನ್ನಲಾಗಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ಏಳು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ರಕ್ಷಣೆ ಮತ್ತು ಪರಿಹಾರಕ್ಕಾಗಿ ದೆಹಲಿ ಪೊಲೀಸ್ ತಂಡ ಕೂಡ ತಲುಪಿದೆ.

ಕಿರಿದಾದ ರಸ್ತೆಗಳ ಸುತ್ತಲೂ ಅವಶೇಷಗಳು ಬಿದ್ದಿರುವುದರಿಂದ ತಂಡಗಳು ತ್ವರಿತ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ತೊಂದರೆಗಳನ್ನು ಎದುರಿಸುತ್ತಿವೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಘಟನೆಯ ಕುರಿತು ಟ್ವೀಟ್ ಮಾಡಿದ್ದು, "ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿತದ ಅಪಘಾತವು ತುಂಬಾ ದುಃಖಕರವಾಗಿದೆ. ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಮಾಡುತ್ತಿದೆ ಮತ್ತು ನಾನು ಜಿಲ್ಲಾಡಳಿತದ ಮೂಲಕ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಯುಎನ್ಐ ಎಸ್ಎ 1809
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..