Saturday, Oct 23 2021 | Time 04:44 Hrs(IST)
Sports Share

ದೆಹಲಿ ಮಣಿಸಿದ ಕೆಕೆಆರ್, ಸುನೀಲ್ ನರೈನ್ ಆಲ್ ರೌಂಡರ್ ಆಟ

ಶಾರ್ಜಾ, ಸೆ.28 (ಯುಎನ್ಐ)- ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 14ನೇ ಆವೃತ್ತಿಯ 41ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ. ಪೂರ್ಣ ಅಂಕ ಕಲೆ ಹಾಕಿ ನಾಲ್ಕನೇ ಸ್ಥಾನ ಭಧ್ರ ಪಡಿಸಿಕೊಂಡಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದೆಹಲಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 127 ರನ್ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ಕೆಕೆಆರ್ 18.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 130 ರನ್ ಕಲೆ ಹಾಕಿ ಜಯ ಸಾಧಿಸಿತು.

ಗುರಿ ಬೆನ್ನಟ್ಟಿದ ಕೆಕೆಆರ್ ಪರ ಮೊದಲ ವಿಕೆಟ್ ಗೆ ವೆಂಕಟೇಶ್ ಅಯ್ಯರ್ ಹಾಗೂ ಶುಭಮನ್ ಗಿಲ್ ಮೊದಲ ವಿಕೆಟ್ ಗೆ 28 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಅಯ್ಯರ್ ಲಲಿತ್ ಯಾದವ್ ಎಸೆತದಲ್ಲಿ 14 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ರಾಹುಲ್ ತ್ರಿಪಾಠಿ (9) ಹೆಚ್ಚು ಹೊತ್ತು ನಿಲ್ಲಲಿಲ್ಲ.

ಮೂರನೇ ವಿಕೆಟ್ ಗೆ ನಿತೀಶ್ ರಾಣಾ, ಗಿಲ್ ಜೋಡಿ 24 ರನ್ ಸೇರಿಸಿದರೆ, ಐದನೇ ವಿಕೆಟ್ ಗೆ 29 ರನ್ ಹಾಗೂ ಆರನೇ ವಿಕೆಟ್ ಗೆ 26 ರನ್ ಗಳ ಜೊತೆಯಾಟ ಮೂಡಿಬಂದಿತು. ದಿನೇಶ್ ಕಾರ್ತಿಕ್ 12 ಹಾಗೂ ಆಲ್ ರೌಂಡರ್ ಸುನಿಲ್ ನರೈನ್ 21 ರನ್ ಸಿದಿರು. ಭರವಸೆಯ ಆಟಗಾರ ನಿತೀಶ್ ರಾಣಾ ಅಜೇಯ 36 ರನ್ ಬಾರಿಸಿದರು. ಇವರ ಇನ್ನಿಂಗ್ಸ್ ನಲ್ಲಿ ಎರಡು ಬೌಂಡರಿ, ಎರಡು ಸಿಕ್ಸರ್ ಸೇರಿವೆ.
ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡದ ಆರಂಭಿಕರಾದ ಸ್ಟೀವನ್ ಸ್ಮಿತ್ ಹಾಗೂ ಶಿಖರ್ ಧವನ್ ಸಾಧಾರಣ ಮೊತ್ತದ ಜೊತೆಯಾಟವನ್ನು ನೀಡಿದರು. 24 ರನ್ ಗಳಿಸಿ ಮುನ್ನುಗುತ್ತಿದ್ದ ಶಿಖರ್ 5 ಬೌಂಡರಿ ಸೇರಿದಂತೆ 24 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ರನ್ ಕಲೆ ಹಾಕುವಲ್ಲಿ ವಿಫಲರಾದರು.

ಮೂರನೇ ವಿಕೆಟ್ ಗೆ ಅನುಭವಿ ಸ್ಮಿತ್ ಹಾಗೂ ನಾಯಕ ರಿಷಭ್ ಪಂತ್ ಜೋಡಿ 36 ಎಸೆತಗಳಲ್ಲಿ 37 ರನ್ ಸೇರಿಸಿದರು. ಸ್ಮಿತ್ 4 ಬೌಂಡರಿ ಸಹಾಯದಿಂದ 39 ರನ್ ಬಾರಿಸಿ ಫಾರ್ಗ್ಯೂಸನ್ ಗೆ ವಿಕೆಟ್ ಒಪ್ಪಿಸಿದರು.

ಉಳಿದ ಆಟಗಾರರ ಒಂದಕ್ಕಿಯಲ್ಲಿ ಆಟ ಮುಗಿಸಿದರು. ನಾಯಕ ಪಂತ್ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 36 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 39 ರನ್ ಸಿಡಿಸಿದರು.

ಕೆಕೆಆರ್ ಪರ ಲೂಕಿ ಫಾರ್ಗ್ಯೂಸನ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್ ತಲಾ ಎರಡು ವಿಕೆಟ್ ಪಡೆದರು.

ಯುಎನ್ಐ ವಿಎನ್ಎಲ್ 2031
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..