Thursday, Dec 9 2021 | Time 00:22 Hrs(IST)
Sports Share

ಬೆಂಗಳೂರು ಗೆಲುವಿಗೆ 150 ರನ್ ಗುರಿ ನೀಡಿದ ರಾಯಲ್ಸ್

ದುಬೈ, ಸೆ.29 (ಯುಎನ್ಐ)- ಆರಂಭದಲ್ಲಿ ರನ್ ನೀಡಿ ಕೈ ಸುಟ್ಟುಕೊಂಡರು ನಂತರದಲ್ಲಿ ಬಿಗುವಿನ ದಾಳಿ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಐಪಿಎಲ್ ನ 43ನೇ ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತಕ್ಕೆ ಕಟ್ಟಿ ಹಾಕಿದೆ.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ ಗಳಲ್ಲಿ 9 ವಿಕೆಟ್ ಗೆ 149 ರನ್ ಸೇರಿಸಿತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ರಾಯಲ್ಸ್ ಪರ ಎವಿನ್ ಲೂಯಿಸ್ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಮೊದಲ ವಿಕೆಟ್ ಗೆ 8.2 ಓವರ್ ಗಳಲ್ಲಿ 77 ರನ್ ಸೇರಿಸಿತು. ಜೈಸ್ವಾಲ್ 3 ಬೌಂಡರಿ, 2 ಸಿಕ್ಸರ್ ಸೇರಿದಂತೆ 31 ರನ್ ಗಳಿಸಿ ಮುನ್ನುಗುತ್ತಿದ್ದಾಗ ಕ್ರಿಸ್ಟಿಯಾನ್ ಎಸೆತದಲ್ಲಿ ಸಿರಾಜ್ ಗೆ ಕ್ಯಾಚ್ ನೀಡಿದರು.

ಸೊಗಾಸದ ಬ್ಯಾಟಿಂಗ್ ನಡೆಸುತ್ತಿದ್ದ ಎವಿನ್ ಲೂಯಿಸ್ 37 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 58 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಉಳಿದಂತೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸಂಜು ಸ್ಯಾಮ್ಸನ್ (19), ಮಹಿಪಾಲ್ ಲ್ರೋಮರ್ (3), ರಾಹುಲ್ ತೆವಾಟಿಯಾ (2) ಅಲ್ಪ ಮೊತ್ತಕ್ಕೆ ನಿರಾಸೆ ಅನುಭವಿಸಿದರು. ಮಧ್ಯಮ ಹಾಗೂ ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.

ಕೊನೆಯ ಓವರ್ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ ಮೂರು ವಿಕೆಟ್ ಪಡೆದರು. ಸ್ಪಿನ್ ಬೌಲರ್ ಗಳಾದ ಯಜುವೇಂದ್ರ ಚಹಾಲ್, ಶಹಬಾಜ್ ಅಹ್ಮದ್ ತಲಾ ಎರಡು ವಿಕೆಟ್ ಕಬಳಿಸಿದರು.
ಯುಎನ್ಐ ವಿಎನ್ಎಲ್ 2135