Monday, Oct 18 2021 | Time 23:37 Hrs(IST)
Karnataka Share

ವಿಧಾನಸಭೆಗೆ ಅಪಮಾನ ಸಲ್ಲದು: ಸಿದ್ದರಾಮಯ್ಯ

ಬೆಂಗಳೂರು,ಸೆ.15 (ಯುಎನ್ಐ) ವಿಧಾನಸಭೆ ಅಧಿವೇಶನವನ್ನು ಕಾಲ,ಕಾಲಕ್ಕೆ ಕರೆಯದೇ ರಾಜ್ಯದ ಬಿಜೆಪಿ ಸರ್ಕಾರ ವಿಧಾನಸಭೆಗೆ ಅಪಮಾನ, ಅಪಚಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವಾದ ಬೆಲೆ ಏರಿಕೆ ಕುರಿತು ಮಾತನಾಡಿದ ಅವರು, ಆರು ತಿಂಗಳ ಅವಧಿಯಲ್ಲಿ ವಿಧಾನಮಂಡಲ ಕಲಾಪ ನಡೆಸಬೇಕಿತ್ತು. ನಾವು ಬೆಲೆ ಏರಿಕೆಯಂತಹ ಗಂಭೀರ ವಿಚಾರಗಳನ್ನು ಎಲ್ಲಿ ಪ್ರಸ್ತಾಪಿಸಬೇಕು, ಎಲ್ಲಿ ಉತ್ತರ ಪಡೆಯಬೇಕು ಎಂದು ಪ್ರಶ್ನಿಸಿದರು.
ಈಗ ಕೇವಲ 10 ದಿನಗಳ ಅಧಿವೇಶನ ಕರೆಯಲಾಗಿದೆ. ಸಾಕಷ್ಟು ವಿಷಯಗಳನ್ನು ಎಲ್ಲಾ ಸದಸ್ಯರು ಪ್ರಸ್ತಾಪಿಸಲು ಅವಕಾಶ ಸಿಗದು. ಕಡೆಯ ಪಕ್ಷ ಇನ್ನೂ 10 ದಿನಗಳ ಕಾಲ ಅಧಿವೇಶನ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಕನಿಷ್ಠ ಐದು ದಿನವಾದರೂ ಅಧಿವೇಶನ ಮುಂದುವರಿಸಲೇಬೇಕು ಇದನ್ನು ಕಲಾಪ ಸಲಹಾ ಸಮಿತಿಯಲ್ಲಿ ಸರ್ಕಾರಕ್ಕೆ ಒತ್ತಿ ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಮಾಧುಸ್ವಾಮಿ ಸಮಜಾಯಿಷಿ ಕೊರೊನಾ ಕಾಟದಿಂದಾಗಿ ಒಂದು ತಿಂಗಳು ಸದನ ಕರೆಯುವುದು ವಿಳಂಬವಾಗಿದೆ. ನಾವು ಉದ್ದೇಶಪೂರ್ವಕವಾಗಿ ಯಾವುದೇ ವಿಳಂಬ ಮಾಡಿಲ್ಲ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಸರ್ಮರ್ಥನೆ ನೀಡಿದರು.
ಯುಎನ್ಐ ಕೆಎಸ್ ಆರ್ ಪಿಕೆ
More News
ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

18 Oct 2021 | 9:46 PM

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು

 Sharesee more..
1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

18 Oct 2021 | 9:42 PM

1 ರಿಂದ 5 ರವರೆಗಿನ ತರಗತಿಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವುಗಳು ಹಾರಿಗೊಳ್ಳುವಂತೆ ಗಮನಹರಿಸುವುದು ಆಯಾ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಂತ್ರಣ ಕುರಿತಂತೆ ಸಂಬಂಧಿಸಿದ ಸಂಸ್ಥೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

 Sharesee more..
ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

18 Oct 2021 | 9:39 PM

ಪ್ರಯಾಣಿಕರನ್ನು ಸ್ವಯಂಚಾಲಿತ ಥರ್ಮಲ್ ಪರೀಕ್ಷಾ ಕ್ಯಾಮೆರಾಗಳ ಮುಖಾಂತರ ತಪಾಸಣೆಗೊಳಪಡಿಸುವುದು ಅಗತ್ಯ ಎಂದು ಹೇಳಲಾಗಿದೆ. ಇಂಗ್ಲೆಡ್ ನಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಅನ್ವಯಿಸುವ ಕುರಿತು ಕೇಂದ್ರ ಸರಕಾರ ಸೂಚಿಸಿರುವ ಮಾರ್ಗಸೂಚಿ ಅನುಸರಣೆ ಮುಂದುವರಿಯುತ್ತದೆ. ಇದರ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತದೆ ಎಂದು ಹೇಳಲಾಗಿದೆ.

 Sharesee more..
ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

18 Oct 2021 | 9:27 PM

ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ‌. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 Sharesee more..

ನಗರದಲ್ಲಿ ಮತ್ತೊಂದು ಬೆಂಕಿ ಅವಘಡ

18 Oct 2021 | 6:20 PM

 Sharesee more..