Wednesday, Oct 20 2021 | Time 16:27 Hrs(IST)
Karnataka Share

ರಾಜ್ಯದಲ್ಲಿನ್ನೂ ವೆಂಟಿಲೇಟರ್ ಸಮಸ್ಯೆ ಮುಗಿದಿಲ್ಲ!

ಬೆಂಗಳೂರು, ಸೆ. 15(ಯುಎನ್ಐ) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸಮಸ್ಯೆ ಇನ್ನೂ ಮುಗಿದಿಲ್ಲ ಎಂಬ ವಿಷಯ ವಿಧಾನಸಭೆಯ ಮೂರನೇ ದಿನದ ಕಲಾಪದಲ್ಲಿಂದು ಪ್ರಸ್ತಾಪವಾಯಿತು.

ಶೂನ್ಯ ವೇಳೆಯಲ್ಲಿ ಶಾಸಕ ಹಾಲಪ್ಪ ಈ ವಿಷಯ ಪ್ರಸ್ತಾಪಿಸಿ, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ತುರ್ತು ಸ್ಥಿತಿಯಲ್ಲಿದ್ದ ಗ್ರಾಮಪಂಚಾಯಿತಿ ಸದಸ್ಯರನ್ನು ದಾಖಲಿಸಲು ಹೋದಾಗ ವೆಂಟಿಲೇಟರ್ ಸಮಸ್ಯೆ ಮುಂದಿಟ್ಟಿದ್ದಾರೆ. ಪರಿಸ್ಥಿತಿ ಸುಧಾರಿಸದಿದ್ದರೆ ಜನರು ನಿತ್ಯ ಸಾಯಬೇಕಾಗುತ್ತದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ಡಾ. ಸುಧಾಕರ್, ನಿಮ್ಹಾನ್ಸ್ ನಲ್ಲಿ ಕೇವಲ ರಾಜ್ಯದ ರೋಗಿಗಳಷ್ಟೇ ಅಲ್ಲದೆ ದಕ್ಷಿಣ ಭಾರತದ ರೋಗಿಗಳೂ ದಾಖಲಾಗುವ ಕಾರಣ ಸಂಖ್ಯೆ ಹೆಚ್ಚಿದೆ. ಹಾಗೂ ಎಲ್ಲ ವೆಂಟಿಲೇಟರ್ ಗಳಲ್ಲೂ ರೋಗಿಗಳು ಇದ್ದ ಕಾರಣ ಬ್ರೇನ್ ಹೆಮರೇಜ್ ನಿಂದ ಬಳಲುತ್ತಿದ್ದ ಗ್ರಾಮ ಪಂಚಾಯತಿ ಸದಸ್ಯರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದರು.

ಆದಾಗ್ಯೂ ಸಮಾಧಾನಗೊಳ್ಳದ ಶಾಸಕ ಹಾಲಪ್ಪ, ನಿಮ್ಹಾನ್ಸ್ ನಲ್ಲಿ ವ್ಯವಸ್ಥೆ ಸಮರ್ಪಕವಾಗಿಲ್ಲ. ದೂರವಾಣಿ ಕರೆ ಮಾಡಿದರೆ ಸ್ವೀಕರಿಸುವರೇ ಇರುವುದಿಲ್ಲ. ಹೀಗಾದರೆ ರೋಗಿಗಳ ಗತಿಯೇನು. ವೆಂಟೆಲೇಟರ್ ಇಲ್ಲದ ಕಾರಣ ಇತ್ತೀಚೆಗೆ ಬಂಧುಗಳಿಬ್ಬರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು.

ಕಳೆದ ಮೂರು ತಿಂಗಳ ಹಿಂದೆ ವೆಂಟಿಲೇಟರ್ ಸಮಸ್ಯೆ ಅಧಿಕವಾದಾಗ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಇರುವಂತೆ ಕ್ರಮ ಕೈಗೊಳ್ಳಲಾಗಿತ್ತು. ಬೆಂಗಳೂರಿನ ಕೆ ಆರ್ ಆಸ್ಪತ್ರೆ, ಚಿಕ್ಕಮಗಳೂರಿನ ಕೊಪ್ಪ ಮೊದಲಾದೆಡೆಯೂ ವೆಂಟಿಲೇಟರ್ ಸಮಸ್ಯೆ ಎದುರಾಗಿತ್ತು.

ಶಾಸಕ ಹಾಲಪ್ಪ ವಿಧಾನಸಭೆಯಲ್ಲಿ ಇಂದು ಈ ವಿಚಾರ ಪ್ರಸ್ತಾಪಿಸಿದ್ದರಿಂದ ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂಬುದು ನಿಚ್ಚಳವಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಯ ನಿರ್ದೇಶಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳುವುದೋ ಕಾದುನೋಡಬೇಕಿದೆ.

ಯುಎನ್ಐ ಎಸ್ಎ 1503
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..