Monday, Sep 20 2021 | Time 07:40 Hrs(IST)
National Share

ಕೊರೋನ ಎರಡನೆ ಅಲೆಯಲ್ಲಿ 776 ವೈದ್ಯರ ನಿಧನ

ನವದೆಹಲಿ, ಜೂನ್ 25 (ಯುಎನ್ಐ) ಕೊರೊನಾ ಎರಡನೇ ಅಲೆಯ ಸಮಯದಲ್ಲಿ ದೇಶದಲ್ಲಿ 776 ವೈದ್ಯರು ಮೃತಪಟ್ಟಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.
ಬಿಹಾರ ರಾಜ್ಯದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ. ಉಳಿದಂತೆ ಉತ್ತರ ಪ್ರದೇಶದಲ್ಲಿ 79 ಮಂದಿ ವೈದ್ಯರು ಸಾವನ್ನಪ್ಪಿದ್ದು, ಕರ್ನಾಟಕದಲ್ಲಿ 9 ಮಂದಿ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ. ಎಂದು ಹೇಳಲಾಗಿದೆ.
ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರುದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳ ಮಾಹಿತಿ ನೀಡಿದೆ.
ಯುಎನ್ಐ ಕೆಎಸ್ಆರ್ 2156