Wednesday, Dec 8 2021 | Time 23:40 Hrs(IST)
Karnataka Share

ಬಿಜೆಪಿ ಸರಕಾರ ಜನತೆಗೆ ಶಾಪ : ಡಿಕೆಶಿ ವಾಗ್ದಾಳಿ

ಹಾನಗಲ್ , ಅ 18 (ಯುಎನ್ಐ) ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ಪಕ್ಷ, ಈಗ ಯಾವ ನದಿ, ಯಾವ ಸಮುದ್ರಕ್ಕೆ ಎಸೆದಿದೆ? ಎಂದು ಬಿಜೆಪಿ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇರ ತರಾಟೆಗೆ ತೆಗೆದುಕೊಂಡರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಕಟ್ಟಿ ಕೆ ಆರ್ ಎಸ್ ಜಲಾಶಯಕ್ಕೆ ಎಸೆದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಸೇರಿದಂತೆ ಅನೇಕ ಮುಖಂಡರು ಟೀಕೆ ಮಾಡಿದ್ದ ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲೇ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

‘ದಕ್ಷಿಣ ಭಾರತದಲ್ಲಿ ಬಿಜೆಪಿ ಸರಕಾರದ ಹೆಬ್ಬಾಗಿಲು ತೆರೆದಿದ್ದೇ ಯಡಿಯೂರಪ್ಪನವರು ಎಂದು ಹೇಳುತ್ತಿದ್ದ ಬಿಜೆಪಿಯವರು ಅವರನ್ನು ಏಕೆ ಹೀನಾಯವಾಗಿ ನಡೆಸಿಕೊಂಡರು? ಯಾಕೆ ಮೂಲೆಗುಂಪು ಮಾಡಿದರು? ಅವರು ಕಣ್ಣೀರು ಹಾಕಿಕೊಂಡು ಮನೆಗೆ ಹೋಗುವಂತೆ ಏಕೆ ಮಾಡಿದರು. ಈ ಸರಕಾರ ಅವರ ಕಣ್ಣೀರಿನಲ್ಲೇ ಕೊಚ್ಚಿ ಹೋಗಲಿದೆ ಎಂದರು .
‘ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರಕಾರಗಳು ಜನತೆಗೆ, ನಾಡಿಗೆ ಒಂದು ಶಾಪವಾಗಿದೆ. . ಕರ್ನಾಟಕದ ದವರೇ ಕಲ್ಲಿದ್ದಲು ಮಂತ್ರಿ. ಆದರೆ ಇಲ್ಲಿ ಕಲ್ಲಿದ್ದಲು ಕೊರತೆ ಕಾಡುತ್ತಿದೆ.
. ಕರ್ನಾಟಕದವರೇ ಕೇಂದ್ರದಲ್ಲಿ ರಸಗೊಬ್ಬರದ ಮಂತ್ರಿ. ಆದರೂ ಗೊಬ್ಬರದ ಕೊರತೆಯಿದೆ. ಜತೆಗೆ ಬೆಲೆಯೂ ಹೆಚ್ಚಳವಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರಾಗಿದ್ದರೂ ರೆ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲಾಗಲಿ, ಆರ್ಥಿಕ ಅನುದಾನವಾಗಲಿ, ನೆರೆ ಪರಿಹಾರವಾಗಲಿ ದೊರಕಲಿಲ್ಲ ಇವರೆಲ್ಲ ಯಾವ ಪುರುಷಾರ್ಥಕ್ಕೆ ಎಂದು ದೂರಿದರು.


ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ, ಹಿಂದಿನ ಸಿಎಂ ಯಡಿಯೂರಪ್ಪನವರು 1, 800 ಕೋಟಿ ರುಪಾಯಿ ಕೊರೋನಾ ಪ್ಯಾಕೇಜ್ ಪ್ರಕಟಿಸಿದರೂ ಜನರಿಗೆ ಸಮರ್ಪಕ ಪರಿಹಾರ ತಲುಪಲಿಲ್ಲ ಸತ್ತವರ ಕುಟುಂಬಗಳಿಗೂ ಪರಿಹಾರ ಸಿಗಲಿಲ್ಲ ಎಂದು ಹೇಳಿದರು.

ಬಿಜೆಪಿಯವರು ಕೇವಲ ಸುಳ್ಳು ಹೇಳಿ ಮೋಸ ಮಾಡುತ್ತಾರೆ ಸರ್ಕಾರ ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅವರು ರೈತ, ಕಾರ್ಮಿಕ, ಕೋವಿಡ್ ಸೋಂಕಿತರು, ಸತ್ತವರ ಕುಟುಂಬಕ್ಕೆ ಸಹಾಯ ಮಾಡಲಿಲ್ಲ. ರಾಜ್ಯದಿಂದ 25 ಸಂಸದರು ಆಯ್ಕೆಯಾಗಿದ್ದರೂ ರಾಜ್ಯದ ಜನರ ಹಿತಕಾಪಾಡುತ್ತಿಲ್ಲ ಎಂದು ಟೀಕಿದರು. ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ರಾಜ್ಯದ ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಎ.ಎಂ. ಹಿಂಡಸಗೇರಿ, ಅಲ್ಲಂ ವೀರಭದ್ರಪ್ಪ, ಮನೋಹರ್ ತಹಶೀಲ್ದಾರ್, ಪಿ.ಟಿ. ಪರಮೇಶ್ವರ ನಾಯಕ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಅಭ್ಯರ್ಥಿ ಶ್ರೀನಿವಾಸ ಮಾನೆ, ಮಾಜಿ ಸಂಸದ ಚಂದ್ರಪ್ಪ, ಮುಖಂಡ ಅನಿಲ್ ಪಾಟೀಲ್ ಭಾಗವಹಿಸಿದ್ದರು.
ಯುನ್ಐ ಕೆಎಸ್ಆರ್ 1752