Wednesday, Oct 20 2021 | Time 15:24 Hrs(IST)
Karnataka Share

ಕೊನೆಗೂ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧ

ಕೊನೆಗೂ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧ
ONLINE GAMBLING

(ವಿಶೇಷ ವರದಿ: ಸಂಧ್ಯಾ ಸೊರಬ)ಬೆಂಗಳೂರು,ಸೆ.4(ಯುಎನ್ಐ)ಕರ್ನಾಟಕದಲ್ಲಿ ಕೊನೆಗೂ ಆನ್ಲೈನ್ ಜೂಜು,ಬೆಟ್ಟಿಂಗ್ ನಿಷೇಧಕ್ಕೆ ಸರ್ಕಾರ ಮುಂದಾಗಿದೆ. ತಮಿಳುನಾಡು, ಕೇರಳ ಮಾದರಿಯಲ್ಲಿ ಆನ್ಲೈನ್ ಜೂಜಿಗೆ ನಿಷೇಧಿಸಿ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಆನ್ಲೈನ್ ಜೂಜು, ಬೆಟ್ಟಿಂಗ್ ನಿಷೇಧಕ್ಕೆ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ.ಕಳೆದ ಡಿಸೆಂಬರ್ ತಿಂಗಳಿನಲ್ಲಿ ಆನ್‌ ಲೈನ್ ಮೂಲಕ ನಡೆಯುವ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿ ಜನವರಿ 12ರೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು.ದಾವಣೆಗೆರೆ ನಿವಾಸಿ ಡಿ. ಶಾರದಾ ಎನ್ನುವವರು ಆನ್‌ಲೈನ್ ಜೂಜು, ಬೆಟ್ಟಿಂಗ್ ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದು, ಆನ್‌ಲೈನ್ ಜೂಜು ಮುತ್ತು ಬೆಟ್ಟಿಂಗ್ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.ಅದರಂತೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀರ ಅರ್ಜಿಯ ವಿಚಾರಣೆ ನಡೆಸಿ, ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತ್ತು.ಅದರಂತೆ ಕಳೆದ ಜೂನ್ 21 ರಂದು ವಿಚಾರಣೆ ನಡೆದಾಗ ರಾಜ್ಯದಲ್ಲಿ

ಆನ್ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿದ್ದಕ್ಕೆ ಸರ್ಕಾರಿ ವಕೀಲರು ಇನ್ನೂ ನಿರ್ಧಾರಕೈಗೊಂಡಿಲ್ಲ.ಇದಕ್ಕಾಗಿ 15 ದಿನಗಳ ಕಾಲಾವಕಾಶ ಕೇಳಿತ್ತು. ಅಲ್ಲದೆ, ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಯುವುದರಿಂದ ರಾಜ್ಯ ಅದನ್ನು ನಿಯಂತ್ರಿಸಲಾಗದು, ಅದಕ್ಕೆ ಕೇಂದ್ರ ಸರಕಾರವನ್ನು ಪ್ರತಿವಾದಿಯನ್ನಾಗಿ ಮಾಡಬೇಕು' ಎಂದಿದರು.ಅದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲ ಶ್ರೀಧರ್‌ಪ್ರಭು, 'ಬೆಟ್ಟಿಂಗ್‌ ಮತ್ತು ಗ್ಯಾಬ್ಲಿಂಗ್‌ ವಿಚಾರ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಾಗಿರುವುದರಿಂದ ಆ ಕುರಿತ ಕಾನೂನುಗಳನ್ನು ರಾಜ್ಯ ಸರಕಾರವೇ ರೂಪಿಸಬಹುದು. ಕೇಂದ್ರವನ್ನು ಪ್ರತಿವಾದಿ ಮಾಡುವ ಅಗತ್ಯವಿಲ್ಲ. ಕೇರಳ ಮತ್ತು ತಮಿಳುನಾಡು ಸೇರಿ ಹಲವು ರಾಜ್ಯಗಳು ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಿಸಿವೆ' ಎಂದು ಮಾಹಿತಿ ನೀಡಿದ್ದರು.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಗೃಹಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧದ ಬಗ್ಗೆ ಅಧಿಕಾರಿಗಳು ಹಾಗೂ ಯಡಿಯೂರಪ್ಪ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಂಡಿದ್ದರು.ನ್ಯಾಯಾಲಯದ ನೀಡಿದ್ದ ಸೂಚನೆಯಂತೆ ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳ ಹೈಕೋರ್ಟ್ ಆನ್‌ಲೈನ್ ಜೂಜು ನಿಯಂತ್ರಿಸಲು ಅಧ್ಯಯನ ನಡೆಸಿ ರಾಜ್ಯ ಸರ್ಕಾರ ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಲು ಮುಂದಾಗಿದ್ದು,ಸರ್ಕಾರ ಇದೀಗ ತನ್ನ ತೀರ್ಮಾನವನ್ನು ಪ್ರಕಟಿಸಿದೆ. ಸಚಿವ ಸಂಪುಟಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್, ಜೂಜು ನಿಷೇಧಕ್ಕೆ ಒಪ್ಪಿಗೆ ದೊರೆತಿದ್ದು, ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.ಬರುವ ಅಧಿವೇಶನದಲ್ಲಿ ಈ ಕಾಯ್ದೆ ಮುಂದಿಟ್ಟು ಕಾಯ್ದೆ ಜಾರಿ ಮಾಡಲಾಗುತ್ತಿದೆ. ಎಲ್ಲಾ ರೀತಿಯ ಆನ್ಲೈನ್ ಗ್ಯಾಂಬ್ಲಿಂಗ್ ರಾಜ್ಯದಲ್ಲಿ ನಿಷೇಧವಾಗಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮಿಳುನಾಡು ಸರ್ಕಾರ ಆನ್‌ ಲೈನ್ ಜೂಜನ್ನು ಈಗಾಗಲೇ ನಿಷೇಧಿಸಿದೆ. ಆಂಧ್ರ ಪ್ರದೇಶ ಸರ್ಕಾರ ಜೂಜನ್ನು ನಿಯಂತ್ರಣ ಮಾಡಲು ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಅನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕಾರ ಪಡೆದಿದೆ. ಆನ್‌ ಲೈನ್ ಜೂಜಿನಲ್ಲಿ ತೊಡಗಿದ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು 1 ವರ್ಷದ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಪರಾಧ ಮರುಕಳಿಸಿದರೆ 10 ಸಾವಿರ ದಂಡ ಮತ್ತು ಎರಡು ವರ್ಷದ ಜೈಲು ಶಿಕ್ಷೆ ಇದ್ದು, ಇದು ಜಾಮೀನು ರಹಿತ ಅಪರಾಧವಾಗಿದೆ. ಯುಎನ್ಐ ಯುಎಲ್, 1643

More News
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..