Monday, Oct 18 2021 | Time 22:47 Hrs(IST)
Karnataka Share

ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ : ಡಿಕೆಶಿ

ಹುಬ್ಬಳ್ಳಿ, ಆ ೨೯ (ಯುಎನ್‌ಐ) ಕರೋನಾ ನಿಗ್ರಹ ವಿಚಾರದಲ್ಲಿ ರಾಜ್ಯ ಮಟ್ಟದಲ್ಲಿ ಭಾರಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದರ ಪರಿಣಾಮವಾಗಿ ನಾಯಕತ್ವ ಬದಲಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ನೂತನ ಮುಖ್ಯಮಂತ್ರಿಯನ್ನು ನೇಮಕ ಮಾಡಿ ತನ್ನ ಕೆಲಸ ಮುಗಿಯಿತೆಂದು ಕೈತೊಳೆದಿದೆ ಎಂದು ಲೇವಡಿ ಮಾಡಿದರು.
ಹೈಕಮಾಂಡ್ ಏಕಾಏಕಿ ನಾಯಕತ್ವ ಬದಲಾವಣೆ ಮಾಡಿದ್ದರಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಕಣ್ಣೀರು ಹಾಕಿದರು ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ೧೫ ವರ್ಷಗಳ ಕಾಲ ಆಡಳಿತ ಮಾಡಿದ್ದರೂ ಅವಳಿ ನಗರಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನರು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ನೀರು, ವಿದ್ಯುತ್ ಸಮರ್ಪಕವಾಗಿ ದೊರೆಯುತ್ತಿಲ್ಲ. ಹುಬ್ಬಳ್ಳಿ-ಧಾರವಾಡದ ರಸ್ತೆಗಳು ಬಿಜೆಪಿ ನಾಯಕರ ಕಥೆಯನ್ನು ಸಾರಿ ಹೇಳುತ್ತವೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷ ಒಳ್ಳೆಯ ಪ್ರಣಾಳಿಕೆ ಬಿಡುಗೆ ಮಾಡಿದೆ. ನುಡಿದಂತೆ ನಡೆಯುತ್ತೇವೆ, ನಗರವನ್ನು ಅತಿಕಡಿಮೆ ಅವಧಿಯಲ್ಲಿ ಅಭಿವೃದ್ಧಿಪಡಿಸಲು ಎಲ್ಲಾ ಪ್ರಯತ್ನ ಮಾಡುವುದಾಗಿ ಮಾತುಕೊಟ್ಟಿದ್ದೇವೆ. ಹೀಗಾಗಿ ಜನರು ಬದಲಾವಣೆ ಬಯಸಿದ್ದು ಈ ಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿದರು.
ಯುಎನ್‌ಐ ಕೆಎಸ್‌ಆರ್ ೧೯೪೫
More News
1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

18 Oct 2021 | 9:42 PM

1 ರಿಂದ 5 ರವರೆಗಿನ ತರಗತಿಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವುಗಳು ಹಾರಿಗೊಳ್ಳುವಂತೆ ಗಮನಹರಿಸುವುದು ಆಯಾ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಂತ್ರಣ ಕುರಿತಂತೆ ಸಂಬಂಧಿಸಿದ ಸಂಸ್ಥೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

 Sharesee more..
ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

18 Oct 2021 | 9:39 PM

ಪ್ರಯಾಣಿಕರನ್ನು ಸ್ವಯಂಚಾಲಿತ ಥರ್ಮಲ್ ಪರೀಕ್ಷಾ ಕ್ಯಾಮೆರಾಗಳ ಮುಖಾಂತರ ತಪಾಸಣೆಗೊಳಪಡಿಸುವುದು ಅಗತ್ಯ ಎಂದು ಹೇಳಲಾಗಿದೆ. ಇಂಗ್ಲೆಡ್ ನಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಅನ್ವಯಿಸುವ ಕುರಿತು ಕೇಂದ್ರ ಸರಕಾರ ಸೂಚಿಸಿರುವ ಮಾರ್ಗಸೂಚಿ ಅನುಸರಣೆ ಮುಂದುವರಿಯುತ್ತದೆ. ಇದರ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತದೆ ಎಂದು ಹೇಳಲಾಗಿದೆ.

 Sharesee more..
ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

18 Oct 2021 | 9:27 PM

ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ‌. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 Sharesee more..

ನಗರದಲ್ಲಿ ಮತ್ತೊಂದು ಬೆಂಕಿ ಅವಘಡ

18 Oct 2021 | 6:20 PM

 Sharesee more..

ಬಿಜೆಪಿ ಸರಕಾರ ಜನತೆಗೆ ಶಾಪ : ಡಿಕೆಶಿ ವಾಗ್ದಾಳಿ

18 Oct 2021 | 5:51 PM

 Sharesee more..