Friday, Oct 22 2021 | Time 06:19 Hrs(IST)
Special Share

ಭೂಪೇಂದ್ರ ಪಟೇಲ್‌ ಗುಜರಾತ್‌ ನೂತನ ಮುಖ್ಯಮಂತ್ರಿ

ಗಾಂಧಿನಗರ, ಸೆ 12(ಯುಎನ್‌ ಐ) ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಗೊಂಡಿದ್ದಾರೆ. ಶನಿವಾರ ನಡೆದ ದಿಢೀರ್ ಬೆಳವಣೆಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಗುಜರಾತ್‌ ಮುಂದಿನ ಮುಖ್ಯಮಂತ್ರಿ ಯಾಗಲಿದ್ದಾರೆ ಎಂಬ ಬಗ್ಗೆ ಭಾರಿ ನಡೆಯುತ್ತಿತ್ತು. ಭೂಪೇಂದ್ರ ಪಟೇಲ್ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುವ ಮೂಲಕ ಎಲ್ಲ ಕುತೂಹಲಗಳಿಗೆ ತೆರೆಬಿದ್ದಿದೆ.
ರೂಪಾನಿ ರಾಜೀನಾಮೆಯ ಬೆನ್ನಲ್ಲೆ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪ್ರಮುಖವಾಗಿ ಹಲವು ಹೆಸರುಗಳು ಕೇಳಿಬಂದಿದ್ದವು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಸಂಪುಟ ಸಚಿವ ಆರ್‍.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಕೇಳಿಬಂದಿದ್ದವು.
ಗಾಂಧಿನಗರಕ್ಕೆ ಭಾನುವಾರ ಬೆಳಗ್ಗೆ ಆಗಮಿಸಿದ ಬಿಜೆಪಿ ವರಿಷ್ಠರ ಪ್ರತಿನಿಧಿಗಳು ಸಭೆ ನಡೆಸಿ ನಂತರ ಸುದ್ದಿಗೋಷ್ಟಿಯಲ್ಲಿ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಹೆಸರನ್ನು ಪ್ರಕಟಿಸಿದ್ದಾರೆ.
ಮುಂದಿನ ವರ್ಷದ ಅಂತ್ಯದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತ್ತೊಂದು ಬಾರಿ ಅಧಿಕಾರ ಸುಭದ್ರಗೊಳಿಸಿಕೊಳ್ಳಲು ಬಿಜೆಪಿ ಯೋಜನೆ ಹಾಕಿಕೊಂಡಿದೆ. ಇದರ ಭಾಗವಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ಪಡೆದುಕೊಂಡು, ಪ್ರಬಲ ಪಾಟಿದಾರ್‌ ಸಮುದಾಯದ ಭೂಪೇಂದ್ರ ಪಟೇಲ್‌ ಅವರಿಗೆ ಅವಕಾಶ ನೀಡಿದೆ.
ಯುಎನ್‌ ಐ ಕೆವಿಆರ್‌ 1632
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..