Monday, Sep 20 2021 | Time 08:39 Hrs(IST)
National Share

ಹೆಚ್ಚಿನ ಆರ್ಥಿಕ ನೆರವಿಗೆ ಬಿಎಸ್ ವೈ ಮನವಿ

ನವದೆಹಲಿ, ಜುಲೈ 16(ಯುಎನ್ಐ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆ ಜಾರಿ ವಿಷಯದಲ್ಲಿ ಹೆಚ್ಚು ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಈ ಸಮಯದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಹಾಜರಿದ್ದರು.
ಯುಎನ್ಐ ಕೆಎಎಸ್ಆರ್ 2020