Monday, Oct 18 2021 | Time 23:26 Hrs(IST)
Karnataka Share

ಕಾಂಗ್ರೆಸ್ ಎನ್ನುವುದು ಗಿಮಿಕ್ಸ್

ಬೆಂಗಳೂರು,ಸೆ.13(ಯುಎನ್‌ಐ)ಕಾಂಗ್ರೆಸ್ ಎಂದರೆ ಗಿಮಿಕ್ಸ್, ಗಿಮಿಕ್ಸ್ ಎಂದರೆ ಕಾಂಗ್ರೆಸ್ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಎತ್ತಿನಗಾಡಿ ಮೂಲಕ ವಿಧಾನಸೌಧಕ್ಕೆ ಕಾಂಗ್ರೆಸ್ ನಾಯಕರ ಮುತ್ತಿಗೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀರಾಮುಲು,ಕಾಂಗ್ರೆಸ್ ಪಕ್ಷವನ್ನು ಕಳೆದ 70 ವರ್ಷಗಳಿಂದಲೂ ನೋಡಿದ್ದೇವೆ .ಕಾಂಗ್ರೆಸ್ ನಾಯಕರು ಬರೀ ಗಿಮಿಕ್ಸ್ ಮಾಡಿಕೊಂಡು ಬಂದಿದ್ದಾರೆ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಇಂಧನ ತೈಲಬೆಲೆ ಹೆಚ್ಚಿತ್ತು.ಆದರೆ ಈಗ ಕಾಂಗ್ರೆಸ್ ನಾಯಕರು ಇದನ್ನೇ ವಿರೋಧ ಮಾಡುತ್ತಿರುವುದು ಯಾವ ರೀತಿ ನ್ಯಾಯ?ಹೀಗೆ ತೈಲಬೆಲೆ ಏರಿಕೆಯನ್ನು ಖಂಡಿಸಿತ್ತಿರುವ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ವ್ಯಾಟ್ ಕಡಿಮೆ ಮಾಡಲು ಸಾಧ್ಯವೇ?ಡಿಸೇಲ್, ಪೆಟ್ರೋಲ್ ನಮ್ಮ ರಾಜ್ಯದಲ್ಲಿ ಮಾತ್ರ ಹೆಚ್ಚಾಗಿಲ್ಲ .ಕಾಗ್ರೆಸ್ ಅಧಿಕಾರ ಇರುವ ರಾಜ್ಯದಲ್ಲಿ ವ್ಯಾಟ್ ಹೆಚ್ಚಿಗೆ ಮಾಡಿದೆ.ಕಾಂಗ್ರೆಸ್ ನಾಯಕರಿಗೆ ತಾಕತ್ ಇದ್ದಿದ್ದೇ ಆದಲ್ಲಿ ವ್ಯಾಟ್ ಕಡಿಮೆ ಮಾಡಲಿ ಎಂದು ಸವಾಲೆಸೆದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ,ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ .ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಳಿತವಾಗುತ್ತಿರುವುದನ್ನು ಕಾಂಗ್ರೆಸ್ ಗಮನಿಸಬೇಕು.ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುವುದಾದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅವುಗಳ ದರ ಕಡಿಮೆ ಮಾಡಿ ಬಂದು ಕರ್ನಾಟಕದಲ್ಲಿ ಎತ್ತಿನ ಗಾಡಿ, ಸೈಕಲ್ ನಲ್ಲಿ ಬರಲಿ ಎಂದು ವ್ಯಂಗ್ಯವಾಡಿದರು.
ಯುಎನ್ಐ ಯುಎಲ್, 2252
More News
ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

18 Oct 2021 | 9:46 PM

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು

 Sharesee more..
1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

18 Oct 2021 | 9:42 PM

1 ರಿಂದ 5 ರವರೆಗಿನ ತರಗತಿಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವುಗಳು ಹಾರಿಗೊಳ್ಳುವಂತೆ ಗಮನಹರಿಸುವುದು ಆಯಾ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಂತ್ರಣ ಕುರಿತಂತೆ ಸಂಬಂಧಿಸಿದ ಸಂಸ್ಥೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

 Sharesee more..
ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

18 Oct 2021 | 9:39 PM

ಪ್ರಯಾಣಿಕರನ್ನು ಸ್ವಯಂಚಾಲಿತ ಥರ್ಮಲ್ ಪರೀಕ್ಷಾ ಕ್ಯಾಮೆರಾಗಳ ಮುಖಾಂತರ ತಪಾಸಣೆಗೊಳಪಡಿಸುವುದು ಅಗತ್ಯ ಎಂದು ಹೇಳಲಾಗಿದೆ. ಇಂಗ್ಲೆಡ್ ನಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಅನ್ವಯಿಸುವ ಕುರಿತು ಕೇಂದ್ರ ಸರಕಾರ ಸೂಚಿಸಿರುವ ಮಾರ್ಗಸೂಚಿ ಅನುಸರಣೆ ಮುಂದುವರಿಯುತ್ತದೆ. ಇದರ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತದೆ ಎಂದು ಹೇಳಲಾಗಿದೆ.

 Sharesee more..
ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

18 Oct 2021 | 9:27 PM

ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ‌. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 Sharesee more..

ನಗರದಲ್ಲಿ ಮತ್ತೊಂದು ಬೆಂಕಿ ಅವಘಡ

18 Oct 2021 | 6:20 PM

 Sharesee more..