Wednesday, Oct 20 2021 | Time 15:36 Hrs(IST)
Karnataka Share

ಬೆಳೆ ವಿಮೆ ಸೌಲಭ್ಯದ ಪಾಠ ಹೇಳಿಕೊಟ್ಟ ಉದಾಸಿ ಮೇಸ್ಟ್ರು…!!

ಬೆಂಗಳೂರು, ಸೆ 13 (ಯುಎನ್ಐ) ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ., ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಉದಾಸಿ ಆಗಲಿಕೆ ನನ್ನ ಪಾಲಿಗೆ ಬಹಳ ದೊಡ್ಡ ನಷ್ಟವಾಗಿದೆ. ತಂದೆ ಸಮಾನ ರಾಗಿದ್ದ ಉದಾಸಿ ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲೂ ಬಹಳ ಪ್ರಮುಖ ಪಾತ್ರ ವಹಿಸಿದ್ದಾರೆ ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಕೊಂಡಾಡಿದರು.
ಹಾವೇರಿ ಜಿಲ್ಲೆಯ ಸ್ಥಾಪನೆಯಲ್ಲಿ ಅವರು ನಿರ್ವಹಿಸಿದ ಪಾತ್ರವನ್ನು ಮರೆಯಲಾಗದು ಸಾಧ್ಯವಿಲ್ಲ. 7 ಭಾಷೆಗಳ ಮೇಲೆ ಹಿಡಿತ ಹೊಂದಿದ್ದ ಅವರು ನಿರಂತರವಾಗಿ ಕಲಿಯುವ ಮತ್ತು ಅಧ್ಯಯನ ಆಸಕ್ತಿಯನ್ನು ಹೊಂದಿದ್ದರು ಅವರ ಕೈ ಬರವಣಿಗೆ, ಹಸ್ತಾಕ್ಷರ, ಬಹಳ ಸುಂದರವಾಗಿತ್ತು ನೇರವಾಗಿ ಹೇಳಬೇಕೆಂದರೆ ಮುತ್ತು ಜೋಡಿಸಿದಂತೆ ಕಾಣುತ್ತಿತ್ತು ಅವರ ಹಸ್ತಾಕ್ಷರ ವೇ ಅವರ ಬದುಕಿನ ಮುಖ ಪರಿಚಯ ತೆರೆದಿಡುತ್ತದೆ ಎಂಬ ಮಾತನ್ನು ಮುಖ್ಯಮಂತ್ರಿ ಹೇಳಿದರು.
ರಾಜ್ಯದ ಇತಿಹಾಸದಲ್ಲಿ ಬೆಳೆ ವಿಮೆ ಸೌಲಭ್ಯವನ್ನು ರೈತರು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದನ್ನು ಅಧ್ಯಯನ ಮಾಡಿ ರೈತ ಸಮುದಾಯಕ್ಕೆ ಮಾರ್ಗದರ್ಶನ ಮಾಡಿ ರೈತರಲ್ಲಿ ಹೊಸ ಚಿಂತನೆ ಹೊಸ ಆಶಾಕಿರಣ ಮೂಡಿಸುವಲ್ಲಿ ಉದಾಸಿ ಪಾತ್ರ ಬಹಳ ಮುಖ್ಯವಾಗಿತ್ತು. ಎಂದು ಮುಖ್ಯಮಂತ್ರಿ ಗುಣಗಾನ ಮಾಡಿದರು.
ಯುಎನ್ಐ ಕೆಎಸ್ಆರ್ 1210
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..