Wednesday, Oct 20 2021 | Time 16:47 Hrs(IST)
Special Share

ನ್ಯಾ. ರಿತು ರಾಜ್‌ ಅವಸ್ಥಿ ಕರ್ನಾಟಕ ಹೈಕೋರ್ಟ್‌ ಸಿಜೆ

ಬೆಂಗಳೂರು, ಸೆ 19(ಯುಎನ್‌ ಐ) ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ರಿತುರಾಜ್ ಅವಸ್ಥಿ ಅವರನ್ನು ನೇಮಿಸಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯಮೂರ್ತಿಗಳಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ಅವರು ಶೀಘ್ರದಲ್ಲಿಯೇ ಮುಖ್ಯ ನ್ಯಾಯಮೂರ್ತಿಯಾಗಿ, ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಹೈಕೋರ್ಟ್‌ನ ಪ್ರಭಾರಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ನ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಗುಜರಾತ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಅದೇ ರೀತಿ ನ್ಯಾ. ಆರ್ ವಿ ಮಳಿಮಠ್ ಹಿಮಾಚಲ ಪ್ರದೇಶದ ಪ್ರಭಾರಿ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ಬಡ್ತಿ ಪಡೆದು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆಗೊಂಡಿದ್ದಾರೆ.
ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಎ ಎಸ್ ಓಕಾ ಅವರೊಂದಿಗೆ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಳಾಗಿ ಇತ್ತೀಚಿಗೆ ಬಡ್ತಿ ಪಡೆದುಕೊಂಡಿದ್ದರು. ಸುಪ್ರೀಂ ಕೋರ್ಟ್‌ ಕೊಲಿಜಿಯಂ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ನ ಹತ್ತು ನ್ಯಾಯಮೂರ್ತಿಗಳನ್ನು ಕಾಯಂ ಮಾಡಿದೆ.
ಯುಎನ್‌ ಐ ಕೆವಿಆರ್‌ 1154