Wednesday, Oct 20 2021 | Time 16:05 Hrs(IST)
Karnataka Share

ವಿದ್ಯುತ್ ಬಿಲ್ ಅಕ್ರಮ ಮೂವರ ಅಮಾನತು: ಸುನಿಲ್ ಕುಮಾರ್

ಬೆಂಗಳೂರು, ಸೆಪ್ಟಂಬರ್ 4 (ಯುಎನ್ಐ) ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅವನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ.
ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತ ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟವಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮದ ಮೂಲಕ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವವರು ಹೇಳಿದ್ದಾರೆ.
ಪ್ರಸ್ತುತ ಈ ಮೂವರು ಸಿಬ್ಬಂದಿ ಗಳು ಬೇರೆ, ಬೇರೆ ಐ ಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐ ಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿದ್ದು, ಇವರ ವಿರುದ್ದ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.
ಯುಎನ್ಐ ಕೆಎಸ್ಆರ್ 1412
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..