Sunday, Sep 26 2021 | Time 19:20 Hrs(IST)
Special Share

ರಾಹುಲ್‌ ಗಾಂಧಿ ನಿವಾಸದಲ್ಲಿ ಪ್ರಶಾಂತ್‌ ಕಿಶೋರ್‌ ಮಾತುಕತೆ

ರಾಹುಲ್‌ ಗಾಂಧಿ ನಿವಾಸದಲ್ಲಿ ಪ್ರಶಾಂತ್‌ ಕಿಶೋರ್‌ ಮಾತುಕತೆ
ರಾಹುಲ್‌ ಗಾಂಧಿ ನಿವಾಸದಲ್ಲಿ ಪ್ರಶಾಂತ್‌ ಕಿಶೋರ್‌ ಮಾತುಕತೆ

ನವದೆಹಲಿ, ಜುಲೈ 13(ಯುಎನ್‌ ಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮಂಗಳವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಅವರ ನಿವಾಸಕ್ಕೆ ಪಿಕೆ ಅವರೇ ಸ್ವಯಂ ತೆರಳಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಪ್ರಶಾಂತ್‌ ಕಿಶೋರ್‌ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿದ್ದರು.

ಕಳೆದ ಕೆಲವು ದಿನಗಳಿಂದ ಭಾರತೀಯ ಜನತಾ ಪಕ್ಷದ ವಿರುದ್ಧ ದೇಶಾದ್ಯಂತ ಅತಿ ದೊಡ್ಡ ರಾಜಕೀಯ ರಂಗ ರಚಿಸಲು ವಿವಿಧ ಪಕ್ಷಗಳು ಪ್ರಯತ್ನಿಸುತ್ತಿವೆ. ಆದರೆ, ಕಾಂಗ್ರೆಸ್ ಪಕ್ಷದ ನಾಯಕತ್ವದಲ್ಲೇ ರಂಗ ರಚಿಸಲಾಗುವುದು, ಕಾಂಗ್ರೆಸ್ ಇಲ್ಲದೆ ಬಿಜೆಪಿಗೆ ಪರ್ಯಾಯ ರಂಗ ಸಾಧ್ಯವಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಹೇಳಿದ್ದಾರೆ. ಈ ಪ್ರಯತ್ನಗಳ ಭಾಗವಾ ಗಿ ರಾಹುಲ್ ಅವರನ್ನು ಪ್ರಶಾಂತ್‌ ಕಿಶೋರ್‌ ಭೇಟಿಯಾಗಿದ್ದಾರೆ ಎಂಬ ವಾದಗಳಿವೆ. ಕೆಲವು ದಿನಗಳ ಹಿಂದೆ ರಾಹುಲ್ ಗಾಂಧಿ ಅವರನ್ನು ಪ್ರಶಾಂತ್‌ ಕಿಶೋರ್‌ ಶ್ಲಾಘಿಸಿ, ಭವಿಷ್ಯದ ನಾಯಕ ರಾಹುಲ್‌ ಎಂಬ ಅವರ ಹೇಳಿಕೆ ಇದಕ್ಕೆ ಪುಷ್ಟಿ ನೀಡುತ್ತವೆ.

ಬಿಜೆಪಿಯೇತರ ಪಕ್ಷಗಳು ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಸಭೆ ನಡೆಸಲಿವೆ. ಶರದ್ ಪವಾರ್ ನೇತೃತ್ವದಲ್ಲಿ ಈಗಾಗಲೇ ಮೂರು ಬಾರಿ ಭೇಟಿಯಾಗಿದೆ. ಈ ಸಭೆಗಳಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರೂ .. ಪಕ್ಷದ ವರಿಷ್ಟರು ಇದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸಲಿಲ್ಲ. ಪ್ರಶಾಂತ್‌ ಕಿಶೋರ್‌ ಕೆಲ ಸಮಯದಿಂದ ಬಿಜೆಪಿಯೇತರ ಪಕ್ಷಗಳಿಗೆ ಚುನಾವಣಾ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರೊಂದಿಗೆ ಆಗಾಗ್ಗೆ ಸಭೆ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ತಾವು ಮಾಡುತ್ತಿರುವ ಕೆಲಸ ತ್ಯಜಿಸುವುದಾಗಿ ಘೋಷಿಸಿದ್ದರೂ, ಪವಾರ್ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಆಗಾಗ್ಗೆ ಸಭೆ ನಡೆಸುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ವ್ಯವಸ್ಥೆ ರೂಪಿಸಲು ಪ್ರಶಾಂತ್‌ ಕಿಶೋರ್‌ ಪ್ರಸ್ತುತ ನಿರ್ವಹಿಸುತ್ತಿರುವ ವೃತ್ತಿಯನ್ನು ಬದಿಗಿರಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯುಎನ್‌ ಐ ಕೆವಿಆರ್‌ 1853