Monday, Oct 18 2021 | Time 23:04 Hrs(IST)
Karnataka Share

ಕಾಂಗ್ರೆಸ್ ಧುರೀಣ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು, ಸೆ 13 (ಯುಎನ್ಐ) ಅನಾರೋಗ್ಯ ಪೀಡಿತರಾಗಿ ಕಳೆದ ಹಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಮತ್ತು ಕಾಂಗ್ರೆಸ್ ಧುರೀಣ ಆಸ್ಕರ್ ಫರ್ನಾಂಡಿಸ್ ಸೋಮವಾರ ನಿಧನ ಹೊಂದಿದರು.
ಮನೆಯಲ್ಲಿ ಯೋಗ ಮಾಡುವ ಸಮಯದಲ್ಲಿ ಜಾರಿ ಬಿದ್ದು ನಂತರ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದ ಬಳಿಕ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ದೆಹಲಿಯಲ್ಲಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. 4 ಭಾರಿ ಸಂಸದರಾಗಿ ನಂತರ ಕೇಂದ್ರ ಸಚಿವರಾಗಿಯೂ ಕೆಲ ಕಾಲ ಅವರು ಕಾರ್ಯ ನಿರ್ವಹಿಸಿದ್ದರು.
ಯುಎನ್ಐ ಕೆಎಸ್ಆರ್ 1517
More News
ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

ಸರ್ಕಾರದಿಂದಲೇ ಮೈಶುಗರ್ ಪುನಶ್ಚೇತನ

18 Oct 2021 | 9:46 PM

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು

 Sharesee more..
1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

1 ರಿಂದ 5ನೇ ತರಗತಿಗಳ ಆರಂಭಕ್ಕೆ ಹಸಿರು ನಿಶಾನೆ

18 Oct 2021 | 9:42 PM

1 ರಿಂದ 5 ರವರೆಗಿನ ತರಗತಿಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವುಗಳು ಹಾರಿಗೊಳ್ಳುವಂತೆ ಗಮನಹರಿಸುವುದು ಆಯಾ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಂತ್ರಣ ಕುರಿತಂತೆ ಸಂಬಂಧಿಸಿದ ಸಂಸ್ಥೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

 Sharesee more..
ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

ತಗ್ಗಿದ ಕೋವಿಡ್ ಪ್ರಕರಣ; ಮತ್ತಷ್ಟೂ ಚಟುವಟಿಕೆಗೆ ಅನುಮತಿ

18 Oct 2021 | 9:39 PM

ಪ್ರಯಾಣಿಕರನ್ನು ಸ್ವಯಂಚಾಲಿತ ಥರ್ಮಲ್ ಪರೀಕ್ಷಾ ಕ್ಯಾಮೆರಾಗಳ ಮುಖಾಂತರ ತಪಾಸಣೆಗೊಳಪಡಿಸುವುದು ಅಗತ್ಯ ಎಂದು ಹೇಳಲಾಗಿದೆ. ಇಂಗ್ಲೆಡ್ ನಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಅನ್ವಯಿಸುವ ಕುರಿತು ಕೇಂದ್ರ ಸರಕಾರ ಸೂಚಿಸಿರುವ ಮಾರ್ಗಸೂಚಿ ಅನುಸರಣೆ ಮುಂದುವರಿಯುತ್ತದೆ. ಇದರ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತದೆ ಎಂದು ಹೇಳಲಾಗಿದೆ.

 Sharesee more..
ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

ಭಾರತದ ಕಾನೂನು ವಿಶ್ವದಲ್ಲೇ ಶ್ರೇಷ್ಠ: ರಾಜ್ಯಪಾಲ

18 Oct 2021 | 9:27 PM

ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ‌. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 Sharesee more..

ನಗರದಲ್ಲಿ ಮತ್ತೊಂದು ಬೆಂಕಿ ಅವಘಡ

18 Oct 2021 | 6:20 PM

 Sharesee more..