Wednesday, Oct 20 2021 | Time 15:42 Hrs(IST)
Karnataka Share

ಜಿ. ಮಾದೇಗೌಡ ಕಾವೇರಿಯ ವರಪುತ್ರ…!!

ಬೆಂಗಳೂರು, ಸೆ 13 (ಯುಎನ್ಐ) ಮಂಡ್ಯ ಜಿಲ್ಲೆಯ ಹಿರಿಯ ನಾಯಕ, ಮಾಜಿ ಸಚಿವ ಜಿ. ಮಾದೇಗೌಡ ಕಾವೇರಿಯ ವರಪುತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. .
ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಮಾದೇಗೌಡರು, ರೈತ ಹೋರಾಟದ ಮೂಲಕ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಮಂಡ್ಯ ಜಿಲ್ಲೆಯ ಜನಜನಿತ ನಾಯಕರಾಗಿದ್ದರು . ಆರೋಗ್ಯ ಮತ್ತು ಶಿಕ್ಷಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.
ಗುಂಡೂರಾವ್ ಸಂಪುಟದಲ್ಲಿ ಮಂತ್ರಿಯಾಗಿದ್ದ ಮಾದೇಗೌಡರು ಸರಳ ನಿಷ್ಟೂರ , ನೇರ ರಾಜಕಾರಣಿಯಾಗಿದ್ದರು. ಅದೇ ರೀತಿ ಕೆ. ಆರ್. ಪೇಟೆ ಕೃಷ್ಣ ಅವರು, ಮೌಲ್ಯಾಧಾರಿತ ರಾಜಕಾರಣವನ್ನು ಜೀವನದಲ್ಲಿ ಪಾಲಿಸಿಕೊಂಡು ಬಂದವರು ಅವರ ಆಗಲಿಕೆ ವೈಯಕ್ತಿಕವಾಗಿ ನನಗೆ ಬಹಳ ನಷ್ಟವಾಗಿದೆ. ರಾಜಕೀಯ ರಂಗಕ್ಕೆ ಸಜ್ಜನರು ಮತ್ತು ಪ್ರಾಮಾಣಿಕರು ಬರಬೇಕು ಎಂಬುದಕ್ಕೆ ಆರ್ ಪೇಟೆ ಕೃಷ್ಣ ಸದಾ ಪ್ರೇರಣೆಯಾಗಿದ್ದಾರೆ ಎಂದು ಸಿದ್ದರಾಮಯ್ಯ ಗುಣಗಾನ ಮಾಡಿದರು.
ಮಾಜಿ ಸಚಿವ ಸಿ. ಎಂ ಉದಾಸಿ ಸಜ್ಜನ ರಾಜಕಾರಣಿಯಾಗಿದ್ದು ಅನೇಕ ಭಾಷೆಗಳ ಪಾಂಡಿತ್ಯ ಪಡೆದಿದ್ದರು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನವರಿಗೆ ಬಹಳ ಹತ್ತಿರವಾಗಿದ್ದರು, ಮೃದು ಸ್ವಭಾವದ ರಾಜಕಾರಣಿಯನ್ನು ಕಳೆದುಕೊಂಡಿರುವುದು ಬಹಳ ನೋವಿನ ಸಂಗತಿ ಎಂದೂ ಸಿದ್ದರಾಮಯ್ಯ ಹೇಳಿದರು.
ಯುಎನ್ಐ ಕೆಎಸ್ಆರ್ 1248
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..