Friday, Oct 22 2021 | Time 06:29 Hrs(IST)
Sports Share

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಶಿವ ಥಾಪಾ ಸೆಮೀಸ್ ಗೆ

ಬಳ್ಳಾರಿ, ಸೆ.19 (ಯುಎನ್ಐ)- ಐದು ಬಾರಿ ಏಷ್ಯನ್ ಚಾಂಪಿಯನ್‌ಶಿಪ್ ಪದಕ ವಿಜೇತ ಶಿವ ಥಾಪಾ 5 ನೇ ಎಲೈಟ್ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.
ಬಳ್ಳಾರಿಯ ಇನ್ಸ್‌ಪೈರ್ ಇನ್‌ಸ್ಟಿಟ್ಯೂಟ್‌ನಲ್ಲಿ ಭಾನುವಾರ ನಡೆದ ರೋಮಾಂಚಕ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶಿವ ಥಾಪಾ ಅವರು ರೈಲ್ವೇ ಕ್ರೀಡಾ ಪ್ರಚಾರ ಮಂಡಳಿಯ (ಆರ್‌ಎಸ್‌ಪಿಬಿ) ಅಂಕಿತ್ ನರ್ವಾಲ್ ಅವರನ್ನು ಸೋಲಿಸಿದರು.
ಅಸ್ಸಾಂನ ಬಾಕ್ಸರ್ ಥಾಪಾ ಅತ್ಯುತ್ತಮ ಪಾದ ಚಲನೆಯನ್ನು ಪ್ರದರ್ಶಿಸಿದರು ಮತ್ತು ತಮ್ಮ ನಿಖರವಾದ ಹೊಡೆತಗಳಿಂದ ಎದುರಾಳಿಯ ಮೇಲೆ ಒತ್ತಡ ಹೇರಲು ತಮ್ಮ ಎಲ್ಲಾ ಅನುಭವವನ್ನು ಬಳಸಿದರು. ಥಾಪಾ ಕಠಿಣ ಸವಾಲನ್ನು ಎದುರಿಸಿದರೂ, ತಮ್ಮ ಆವೇಗವನ್ನು ಕಡಿಮೆ ಮಾಡಲಿಲ್ಲ.
ಸಚಿನ್ ಮತ್ತು ವರೀಂದರ್ ಸಿಂಗ್ (60 ಕೆಜಿ) ತಮ್ಮ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ವಿಜಯಶಾಲಿಯಾದರು. 54 ಕೆಜಿ ತೂಕ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಸಚಿನ್ ಅವರು ಗೋವಾದ ರೋಶನ್ ಜಮೀರ್ ಅವರನ್ನು ಸೋಲಿಸುವ ಮೂಲಕ ತಮ್ಮ ಪ್ರಾಬಲ್ಯವನ್ನು ಪ್ರದರ್ಶಿಸಿದರು. 2021 ಏಷ್ಯನ್ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ವರೀಂದರ್ ದಮನ್, ದಿಯು ಮತ್ತು ನಾಗರ್ ಹವೇಲಿಯ ಇಂದರ್ಜಿತ್ ಸಿಂಗ್ ಅವರನ್ನು 5-0 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿದರು.
ಯುಎನ್ಐ ವಿಎನ್ಎಲ್ 2249
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..