Sunday, Oct 24 2021 | Time 01:56 Hrs(IST)
International Share

ತಾಲಿಬಾನ್ ಗುಂಡಿನ ದಾಳಿ : 4 ಸಾವು, 7 ಮಂದಿಗೆ ಗಾಯ

ಕಾಬೂಲ್, ಸೆ 04 (ಯುಎನ್ಐ/ಸ್ಪುಟ್ನಿಕ್) ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ಗಳು ವಿವಿಧೆಡೆ ಗಾಳಿಯಲ್ಲಿ ಗುಂಡು ಪರಿಣಾಮ ನಾಲ್ಕು ಜನರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮೂಲವು ಶನಿವಾರ ಮಾಹಿತಿ ನೀಡಿದೆ
ಹಲವು ಪ್ರಾಂತ್ಯಗಳಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಅಫ್ಘಾನಿಸ್ತಾನದ ರಾಜಧಾನಿಯ ನಿವಾಸಿಗಳು ಇದು ಮತ್ತೊಂದು ಹೋರಾಟದ ಭೀತಿ ಎಂದು ಆತಂಕಗೊಂಡಿದ್ದಾರೆ. ಇಸ್ಲಾಮಿಸ್ಟ್ ಚಳುವಳಿಯು ಪಂಜಶೀರ್ ಪ್ರಾಂತ್ಯವನ್ನು ಸೆರೆಹಿಡಿಯುವುದನ್ನು ಸಂಭ್ರಮಿಸಲು ಗುಂಡು ಹಾರಿಸುತ್ತಿರುವುದಾಗಿ ಹೇಳಿಕೊಂಡಿದೆಯಾದರೂ ಇದನ್ನು ಪ್ರತಿರೋಧ ಶಕ್ತಿಗಳು ನಿರಾಕರಿಸಿವೆ,
ಆದಾಗ್ಯೂ, ಗುಂಡು ಹಾರಿಸುವುದನ್ನು ನಿಲ್ಲಿಸುವಂತೆ ತಾಲಿಬಾನ್ ಮುಖಂಡರು ಉಗ್ರರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ."ನಿನ್ನೆ ತಡರಾತ್ರಿ ಗಾಳಿಯಲ್ಲಿ ಗುಂಡು ಹಾರಿಸಿದ ಪರಿಣಾಮವಾಗಿ ನಾಲ್ಕು ಜನರು ಸಾವನ್ನಪ್ಪಿ ಏಳು ಮಂದಿ ಗಾಯಗೊಂಡರು. ಪಂಜಶೀರ್ ಅನ್ನು ತಾಲಿಬಾನ್ ವಶಪಡಿಸಿಕೊಂಡಿದೆ ಎಂದು ಕಾಬೂಲ್ ಪೊಲೀಸರ ಮೂಲದಿಂದ ತಿಳಿದುಬಂದಿದೆ.
ಗುಂಪಿನ ವಕ್ತಾರರು ಪಂಜಶೀರ್ ಪ್ರಾಂತ್ಯದ ಸಂಪೂರ್ಣ ನಿಯಂತ್ರಣವನ್ನು ದೃಢಪಡಿಸಿದ್ದಾರೆ. ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮರುಲ್ಲಾ ಸಲೇಹ್, ತಾನು ಅಧ್ಯಕ್ಷನೆಂದು ಘೋಷಿಸಿಕೊಂಡಿದ್ದಾರೆ.
ಯುಎನ್ಐ ಎಸ್ಎ 1320
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..