Wednesday, Oct 20 2021 | Time 15:25 Hrs(IST)
Karnataka Share

ಇಂದು ಸಂಜೆ ಸ್ಪಷ್ಟ ನಿರ್ಣಯ

ಇಂದು ಸಂಜೆ  ಸ್ಪಷ್ಟ ನಿರ್ಣಯ
BASAVARAJ BOMMAYI

ಬೆಂಗಳೂರು,ಆ.30(ಯುಎನ್ಐ)ಕೋವಿಡ್ ನಿಯಂತ್ರಣ ಹಿನ್ನಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಗಣೇಶ ಹಬ್ಬ, ಉತ್ಸವ ಮಾಡಬೇಕೇ ಬೇಡವೇ ಎಂಬ ಸ್ಪಷ್ಟ ನಿರ್ಣಯ ಇಂದು ಸಂಜೆ ಹೊರಬೀಳಲಿದೆ.

ಕೆಲ ದಿನಗಳ ಹಿಂದೆ ಸಾರ್ವಜನಿಕವಾಗಿ ಹಬ್ಬ ಆಚರಿಸಬಾರದೆಂಬ ಸರ್ಕಾರದ ನಿರ್ಧಾರಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಸಂಘ ಪರಿವಾರದ ಶಾಸಕರು, ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರಿಂದ ಸರ್ಕಾರ ಮತ್ತೊಮ್ಮೆ ಸ್ಪಷ್ಟತೆ ನೀಡಲು ಇಂದು ಸಜೆ ಸಭೆ ನಡೆಸಲಿದೆ.

ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಜೆ ಈ ಬಗ್ಗೆ ಸಭೆಯಿದೆ. ಸರ್ಕಾರ ಎಲ್ಲವನ್ನೂ‌ ಗಮನಿಸಿದೆ. ಎಲ್ಲರ ಭಾವನೆಗಳನ್ನು ಅರ್ಥ ಮಾಡಿಕೊಂಡಿದೆ.ಮೂರನೇ ಅಲೆಯ ಬಗ್ಗೆ ತಜ್ಙರು ಹೇಳಿದ್ದಾರೆ.ಸಭೆಯಲ್ಲಿ ಹಬ್ಬಾಚರಣೆಯಲ್ಲಿ ಕಳೆದ ವರ್ಷ ಏನಾಯಿತು,ಈ ವರ್ಷ ಏನಾಗಿದೆ ಎಂಬುದನ್ನು ಸಭೆಯಲ್ಲಿ ಚರ್ಚಿಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಯುಎನ್ಐ ಯುಎಲ್, 1335

More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..