Friday, Oct 22 2021 | Time 05:14 Hrs(IST)
Sports Share

ಮುಂಬೈ ಗೆ 157 ರನ್ ಗುರಿ ನೀಡಿದ ಚೆನ್ನೈ

ದುಬೈ, ಸೆ.19 (ಯುಎನ್ಐ)- ಯುವ ಆಟಗಾರ ರುತುರಾಜ್ ಗಾಯಕ್ವಾಡ್ (88 ರನ್) ಇವರ ಭರ್ಜರಿ ಆಟದ ನೆರವಿನಿಂದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎರಡನೇ ಚರಣದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ.

ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಮುಂಬೈ ನಾಯಕ ರೋಹಿತ್ ಶರ್ಮಾ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಆಡಲಿಲ್ಲ. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರನ್ ಪೊಲಾರ್ಡ್ ಮುಂಬೈ ತಂಡ ಮುನ್ನಡೆಸಲಿದ್ದಾರೆ. ಅನ್ ಮೋಲ್ಪ್ರೀತ್ ಸಿಂಗ್ ಈ ಪಂದ್ಯದಿಂದ ಮುಂಬೈ ಪರ ಪಾದಾರ್ಪಣೆ ಮಾಡಿದ್ದಾರೆ.

ಇನ್ನಿಂಗ್ಸ್ ಆರಂಭಿಸಿದ ಚೆನ್ನೈ ತಂಡದ ಸ್ಟಾರ್ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಸ್ಟಾರ್ ಆಟಗಾರ ಫಾಫ್ ಅವರನ್ನು ಮೊದಲ ಓವರ್ ನಲ್ಲಿ ಪೆವಿಲಿಯನ್ ಗೆ ಕಳುಹಿಸುವಲ್ಲಿ ಬೋಲ್ಟ್ ಸಫಲರಾದರು. ಆಲ್ ರೌಂಡರ್ ಮೋಯಿನ್ ಅಲಿ ಮಿಲ್ನೆ ತೋಡಿದ ಖೆಡ್ಡಾಗೆ ಬಲಿಯಾದರು. ಅಂಬಟಿ ರಾಯುಡು ಗಾಯದ ಸಮಸ್ಯೆಯಿಂದ ಅಂಗಳದಿಂದ ಹೊರ ನಡೆದರು.

ಮುಂಬೈ ಬೌಲರ್ ಗಳು ಪವರ್ ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳದರು. ಮೊದಲ ಆರು ಓವರ್ ಗಳಲ್ಲಿ ಚೆನ್ನೈ ಸ್ಟಾರ್ ಆಟಗಾರರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ತಂಡಕ್ಕೆ ನೆರವಾದವರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಹಾಗೂ ರವೀಂದ್ರ ಜಡೇಜಾ. ಈ ಜೋಡಿ ಮುಂಬೈ ಬೌಲರ್ ಗಳನ್ನು ಕಾಡುತ್ತಾ ಇನ್ನಿಂಗ್ಸ್ ಕಟ್ಟಿತು. ಸುಮಾರ 11 ಓವರ್ ವಿಕೆಟ್ ಬೀಳದಂತೆ ಬ್ಯಾಟ್ ಮಾಡಿದ ಜೋಡಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕುವಲ್ಲಿ ನೆರವಾಯಿತು. ಈ ಜೋಡಿ 79 ರನ್ ಗಳ ಕಾಣಿಕೆ ನೀಡಿತು. ಜಡೇಜಾ 33 ಎಸೆತಗಳಲ್ಲಿ 26 ರನ್ ಸಿಡಿಸಿದರು.

ಇನ್ನು ಡ್ವೇನ್ ಬ್ರಾವೊ ತಮ್ಮ ಅನುಭವ ಬಳಸಿ ಬ್ಯಾಟ್ ಮಾಡಿದರು. ಅಲ್ಲದೆ 8 ಎಸೆತಗಳಲ್ಲಿ 23 ರನ್ ಬಾರಿಸಿದರು.
ಯುವ ಆಟಗಾರ ರುತುರಾಜ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 58 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ ಸಹಾಯದಿಂದ 88 ಬಾರಿಸಿ ಅಜೇಯರಾಗುಳಿದರು.
ಯುಎನ್ಐ ವಿಎನ್ಎಲ್ 2154
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..