Sunday, Oct 24 2021 | Time 01:38 Hrs(IST)
International Share

ಕೋವಿಡ್-19: ಪಾಕ್ ನಲ್ಲಿ ಒಂದೇ ದಿನ 67 ಸಾವು, 2988 ಹೊಸ ಪ್ರಕರಣ

ಕರಾಚಿ, ಸೆ.13 (ಯುಎನ್ಐ)- ಪಾಕಿಸ್ತಾನದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ (ಕೋವಿಡ್ -19) ಸೋಂಕಿನಿಂದ 67 ಜನರು ಪ್ರಾಣ ಕಳೆದುಕೊಂಡಿದ್ದು, 2988 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಕಮಾಂಡ್ ಮತ್ತು ಕಾರ್ಯಾಚರಣೆ ಕೇಂದ್ರ (ಎನ್ಸಿಒಸಿ) ಇಂದು ಈ ಮಾಹಿತಿಯನ್ನು ನೀಡಿದೆ.

ಕೊರೋನಾ ಸಾಂಕ್ರಾಮಿಕದ ವಿರುದ್ಧ ಅಭಿಯಾನವನ್ನು ಮುನ್ನಡೆಸುತ್ತಿರುವ ದೇಶದ ಎನ್‌ಸಿಒಸಿ ವಿಭಾಗ, ಸಾಂಕ್ರಾಮಿಕ ರೋಗದಿಂದಾಗಿ ಸಾವಿನ ಸಂಖ್ಯೆ 26,720 ಕ್ಕೆ ಏರಿಕೆಯಾಗಿದ್ದಾಗಿ ತಿಳಿಸಿದೆ. ದೇಶದಲ್ಲಿ 2988 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾದ ನಂತರ, ಒಟ್ಟು ಸೋಂಕಿತರ ಸಂಖ್ಯೆ 12,07,508 ಕ್ಕೆ ಏರಿಕೆಯಾಗಿದೆ. ಇದರಲ್ಲಿ 10,90,176 ಜನರು ಈ ಸಾಂಕ್ರಾಮಿಕ ರೋಗದಿಂದ ಮುಕ್ತರಾಗಿದ್ದಾರೆ.

ಪಾಕಿಸ್ತಾನದ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 90,545 ಕ್ಕೆ ಇಳಿದಿದ್ದು, ಅವರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 5,066 ಜನರ ಸ್ಥಿತಿ ಗಂಭೀರವಾಗಿದೆ.

ಪಾಕಿಸ್ತಾನದ ದಕ್ಷಿಣ ಪ್ರಾಂತ್ಯವಾದ ಸಿಂಧ್ ಕೊರೋನಾದಿಂದ ಹೆಚ್ಚು ಪ್ರಭಾವಿತವಾಗಿದೆ. ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,45,369 ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,14,3902, ಇದರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,287 ಆಗಿದೆ.

ಯುಎನ್ಐ ವಿಎನ್ಎಲ್ 1540
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..