Wednesday, Dec 8 2021 | Time 23:27 Hrs(IST)
Sports Share

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಕೊಹ್ಲಿ ಎಷ್ಟು ರನ್ ಕೊಟ್ಟ ಗೊತ್ತಾ?
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ದುಬೈ, ಅ 20(ಯುಎನ್ಐ) ದುಬೈ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು. ಹೌದು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಸೀಸ್ ವಿರುದ್ಧದ ವಾರ್ಮ್ ಅಪ್ ಪಂದ್ಯವನ್ನು ಆಡಲಾಗುತ್ತಿದೆ. ಈ ವೇಳೆ ಆಸ್ಟ್ರೇಲಿಯಾ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದಾರೆ.ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿರುವುದು ಭಾರತ ತಂಡದ ಟೆನ್ಶನ್ ಗೆ ಕಾರಣವಾಗಿದೆ. ಪಂದ್ಯದ ವೇಳೆ ರೋಹಿತ್ ಶರ್ಮಾ ಮಾತನಾಡಿ, ಹಾರ್ದಿಕ್ ಪಾಂಡ್ಯ ಶೀಘ್ರ ಚೇತರಿಸಿಕೊಳ್ಳಲಿದ್ದಾರೆ. ಹಾಗೂ ತಂಡದ ಪರವಾಗಿ ಬೌಲಿಂಗ್ ಮಾಡಲಿದ್ದಾರೆ ಅಂತಾ ತಿಳಿಸಿದರು. ಐಪಿಎಲ್ ಪಂದ್ಯಗಳಲ್ಲೂ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 24ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯರಾಗುತ್ತಾರಾ ಅಥವಾ ಇಲ್ಲ ಅನ್ನೋದು ಅನುಮಾನಕ್ಕೆ ಕಾರಣವಾಗ ತೊಡಗಿದೆ.ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಓವರ್ ಗಳನ್ನು ಎಸೆದು, 12 ರನ್ ಗಳನ್ನು ನೀಡಿದರು. ಒಟ್ಟಿನಲ್ಲಿ ಭಾರತದ ಬೌಲಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ ಆಸೀಸ್ ವಿರುದ್ಧದ ಪಂದ್ಯದಲ್ಲಿ 6ನೇ ಅಸ್ತ್ರವಾಗಿ ಕಾಣಿಸಿಕೊಂಡಿದ್ದಾರೆ.