Sunday, Oct 24 2021 | Time 02:16 Hrs(IST)
Entertainment Share

ಸೆ.24ರಂದು "ಕರ್ಮಣ್ಯೇವಾಧಿಕಾರಸ್ತೇ" ತೆರೆಗೆ

ಸೆ.24ರಂದು
ಬೆಂಗಳೂರು, ಆಗಸ್ಟ್ 30(ಯುಎನ್ಐ) ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳುವ "ಕರ್ಮಣ್ಯೇವಾಧಿಕಾರಸ್ತೇ" ಎಂಬ ವಾಕ್ಯವನ್ನೇ ಶೀರ್ಷಿಕೆಯಾಗಿ ಹೊಂದಿರುವ ಚಿತ್ರ ಸೆಪ್ಟೆಂಬರ್ 24 ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ. ಅದಕ್ಕಿಂತ ಮುಂಚೆ ಚಿತ್ರದ ಟ್ರೇಲರ್ ಬರಲಿದೆ.

ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶ್ರೀಹರಿ‌ ಆನಂದ್ ನಿರ್ದೇಶಿಸಿದ್ದಾರೆ. ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದ್ದು, ಅತೀ ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ಹಾಡುಗಳು ತೀರ್ಥಹಳ್ಳಿ, ಆಗುಂಬೆ, ಸಾಗರದ ಸುತ್ತಮುತ್ತ ಹಾಗೂ ಕಾಡಿನ ಭಾಗ ದಾಂಡೇಲಿಯಲ್ಲಿ ಚಿತ್ರೀಕರಣಗೊಂಡಿದೆ.

ಅಮೇರಿಕಾದಲ್ಲಿ ಖ್ಯಾತ ವೈದ್ಯರಾಗಿರುವ ರಮೇಶ್ ರಾಮಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಎರಡು ಹಾಡುಗಳಿದ್ದು ರಿತ್ವಿಕ್ ಮುರಳಿಧರ್ ಸಂಗೀತ ನೀಡಿದ್ದಾರೆ. ಸಂಚಿತ್ ಹೆಗ್ಡೆ, ಅಶ್ವಿನಿ, ರಿತ್ವಿಕ್ ಮುರಳೀಧರ್, ಅನನ್ಯ ಭಟ್ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ. ಮೂರು ಸಾಹಸ ಸನ್ನಿವೇಶಗಳಿಗೆ ಮಾಸ್ ಅಶೋಕ್ ಸಾಹಸ ನಿರ್ದೇಶನ ಮಾಡಿದ್ದಾರೆ.

ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ.
ಪ್ರತೀಕ್ ಸುಬ್ರಮಣಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ದಿವ್ಯ ಹಾಗೂ ನೇಪಾಳದ ಡೋಲ್ಮ ನಾಯಕಿಯರು. ನಾಟ್ಯ ರಂಗ, ಉಗ್ರಂ ಮಂಜು, ನಟನ ಪ್ರಶಾಂತ್ ಮೊದಲಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಯುಎನ್ಐ ಎಸ್ಎ 1113
More News
ಹಿರಿಯ ನಟಿ ಮಿನೂ ಮುಮ್ತಾಜ್ ನಿಧನ

ಹಿರಿಯ ನಟಿ ಮಿನೂ ಮುಮ್ತಾಜ್ ನಿಧನ

23 Oct 2021 | 6:36 PM

 Sharesee more..
ಐಪಿಎಲ್ ಹೊಸ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!

ಐಪಿಎಲ್ ಹೊಸ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!

23 Oct 2021 | 3:10 PM

2022ರ ಐಪಿಎಲ್ ತಂಡ ಖರೀದಿ ಮಾಡಲು ಮತ್ತೊಂದು ಬಾಲಿವುಡ್ ಜೋಡಿ ತುದಿಗಾಲಲ್ಲಿ ನಿಂತಿದೆ. ಬಿಟೌನ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಮುಂಬರುವ 2022ರ ಐಪಿಎಲ್ ಗ್ರೌಂಡ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

 Sharesee more..