Wednesday, Feb 26 2020 | Time 10:27 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

‘ಛಪಕ್’ ವಿವಾದ; ಅರ್ಜಿಯ ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

ನವದೆಹಲಿ, ಜ 9 (ಯುಎನ್ಐ) ದೀಪಿಕಾ ಪಡುಕೋಣೆ ಅಭಿನಯದ 'ಛಪಕ್ 'ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ತೀರ್ಪನ್ನು ದೆಹಲಿಯ ಪಟಿಯಾಲ ನ್ಯಾಯಾಲಯ ಕಾಯ್ದಿರಿಸಿದೆ.
ಅರ್ಜಿದಾರರಾದ ಅಪರ್ಣಾ ಭಟ್ ಅವರು, ತಾವು ಹಲವು ವರ್ಷಗಳ ಕಾಲ ಆಸಿಡ್ ದಾಳಿಯ ಸಂತ್ರಸ್ತೆ ಲಕ್ಷ್ಮೀ ಅಗರ್ ವಾಲ್ ಪರ ವಾದ ಮಂಡಿಸಿದ್ದೆ. ಆದರೆ, ನಿರ್ದೇಶಕರು ಚಿತ್ರದಲ್ಲಿ ತಮಗೆ ಯಾವುದೇ ಕ್ರೆಡಿಟ್ ನೀಡಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಇದಕ್ಕೆ ಪರಿಹಾರವಾಗಿ ತಮಗೆ ಯಾವುದೇ ಹಣ ಬೇಕಿಲ್ಲ. ಬದಲಿಗೆ ಚಿತ್ರದಲ್ಲಿ ತಮಗೆ ಹೆಸರು ಉಲ್ಲೇಖಿಸುವಂತೆ ನಿರ್ದೇಶಕರಿಗೆ ಸೂಚನೆ ನೀಡಬೇಕು ಎಂದು ಅವರು ಕೋರಿದ್ದಾರೆ. ತೀರ್ಪು ಇಂದು ಸಂಜೆಯೊಳಗೆ ಹೊರಬೀಳುವ ಸಾಧ್ಯತೆಯಿದೆ.
2005ರಲ್ಲಿ 15 ವರ್ಷದ ಲಕ್ಷ್ಮೀ ಮೇಲೆ ಭಗ್ನಪ್ರೇಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿದ್ದನು. ಆಕೆ ನಂತರ ಏಳು ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಬೇಕಾಯಿತು. ಇದಾದ ನಂತರ ಆಕೆ ಆ್ಯಸಿಡ್ ಸಂತ್ರಸ್ತರ ಪರವಾಗಿ ಕೆಲಸ ಮಾಡಲು ಆರಂಭಿಸಿ, ಇದನ್ನು ತಡೆಯುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಿದ್ದಾಳೆ.
ಈಕೆಯ ಜೀವನಕಥೆಯನ್ನು ಆಧರಿಸಿದ ಚಿತ್ರ "ಛಪಕ್" ಅನ್ನು ಮೇಘನಾ ಗುಲ್ಜಾರ್ ನಿರ್ದೇಶಿಸಿದ್ದು, ಶುಕ್ರವಾರ ತೆರೆಗೆ ಬರಲಿದೆ.
ಯುಎನ್ಐ ಎಸ್ಎಚ್ 1427